
ಕಾರ್ಕಳ,ಮೇ.21:ಮಲೆಕುಡಿಯ ಸಮುದಾಯದ ಯುವಕ ಯುವತಿಯರಿಗೆ ಉದ್ಯೋಗ ಆಧಾರಿತ ಶಿಕ್ಷಣ ಕಾರ್ಯಾಗಾರಇಂದು ಮಾಳ ಪೇರಡ್ಕ ಮಲೆಕುಡಿಯ ಸಮುದಾಯ ಭವನದಲ್ಲಿ ಜರಗಿತು.
ಶಾಸಕರಾದ ವಿ ಸುನಿಲ್ ಕುಮಾರ್ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ಇಂತಹ ಕಾರ್ಯಕ್ರಮಗಳನ್ನು ವರ್ಷಂಪ್ರತಿ ಆಯೋಜನೆ ಮಾಡುವುದರಿಂದ ವಿದ್ಯಾರ್ಥಿಗಳಲ್ಲಿ ಶೈಕ್ಷಣಿಕ ಜಾಗೃತಿಯಾಗುತ್ತದೆ. ಅಲ್ಲದೇ ಸರ್ಕಾರಿ ಉದ್ಯೋಗ, ಖಾಸಗಿ ಕ್ಷೇತ್ರ, ಸ್ವಉದ್ಯೋಗವನ್ನು ಮಾಡುವ ನಿಟ್ಟಿನಲ್ಲಿ ಇಂತಹ ತರಬೇತಿಗಳು ಪೂರಕವಾಗುತ್ತವೆ ಎಂದರು.
ಜಿಲ್ಲಾ ಮಲೆಕುಡಿ ಸಂಘದ ಉಪಾಧ್ಯಕ್ಷೆ ಶಾರದಾ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿ ರಾಜ್ಯಾಧ್ಯಕ್ಷ ಶ್ರೀಧರ್ ಗೌಡ ಈದು ಮಾತನಾಡಿ, ಶಿಕ್ಷಣ ಸಂಘಟನೆ ಜಾಗೃತಿ ಎಂಬ ಧ್ಯೇಯದೊಂದಿಗೆ ಪ್ರಾರಂಭಗೊಂಡ ಮಲೆಕುಡಿಯ ಸಂಘಟನೆಯು ಸಮುದಾಯದ ಮಧ್ಯೆ ಶೈಕ್ಷಣಿಕ ಸಮಿತಿಯನ್ನು ರಚಿಸಿ ಶಿಕ್ಷಣದಿಂದ ವಂಚಿತರಾಗದೆ ಪ್ರತಿಯೊಬ್ಬರು ಉತ್ತಮ ಶಿಕ್ಷಣವನ್ನು ಪಡೆದು ಭವಿಷ್ಯವನ್ನು ರೂಪಿಸಿಕೊಳ್ಳುವಲ್ಲಿ ಸಮಿತಿಯು ಕಾರ್ಯನಿರ್ವಹಿಸಲು ಮುಂದಾಗಿದ್ದು ಪ್ರತಿಯೊಬ್ಬ ವಿದ್ಯಾರ್ಥಿ ಈ ಸಮಿತಿ ಜೊತೆ ಕೈಜೋಡಿಸಬೇಕೆಂದರು.
ವೇದಿಕೆಯಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಸಂತೋಷ್, ಕಲಾ ವೈಭವ ಸಂಯೋಜಕ ಪ್ರದೀಪ ಅಂಡಾರು, ತರಬೇತುದರಾರಾದ ಡಾ. ಸೋಮಶೇಖರ್ ಎಂ, ನೋನಯ್ಯಗೌಡ ರೆಂಜಾಳ, ಉಪಸ್ಥಿತರಿದ್ದರು. ಪುಷ್ಪ ಶ್ರೀಧರ ಗೌಡ ಕಾರ್ಯಕ್ರಮ ನಿರೂಪಿಸಿ ವೈಷ್ಣವಿ ಪನಪಿಲ ಪ್ರಾರ್ಥಿಸಿ , ನೋನಯ್ಯ ರೆಂಜಾಳ ಪ್ರಸ್ತಾಪಿಸಿ ಸ್ವಾಗತಿಸಿದರು. ಶೈಕ್ಷಣಿಕ ಸಮಿತಿ ಸಂಯೋಜಕ ನವೀನ್ ತೆಳ್ಳಾರು, ಧನ್ಯವಾದವಿತ್ತರು.



.
.
.
.
.
.
.
.
.
.
.
.
.
.
.
.
.
.
.
.
