Share this news

ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕೆ ಬಂದರಿನ ಜೆಟ್ಟಿಯಲ್ಲಿ ನಿಲ್ಲಿಸಲಾಗಿದ್ದ ಮೀನು ತುಂಬಿರುವ ಬೋಟ್‌ನಲ್ಲಿ ಕಳ್ಳರು ಸುಮಾರು 15 ಸಾವಿರ ರೂ. ಬೆಲೆ ಬಾಳುವ ಉತ್ತಮ ಜಾತಿಯ ಮೀನನ್ನು ಎಗರಿಸಲು ಮುಂದಾಗಿದ್ದ ವೇಳೆ ಬೋಟ್‌ನ ಕಾರ್ಮಿಕರ ಕೈಗೆ ಸಿಕ್ಕಿ ಬಿದ್ದು ಧರ್ಮದೇಟು ತಿಂದ ಘಟನೆ ನಡೆದಿದೆ.

ರಾತ್ರಿ ಸುಮಾರು 12 ಗಂಟೆ ವೇಳೆಗೆ ಬಂದರಿನಲ್ಲಿ ನಿಲ್ಲಿಸಲಾಗಿದ್ದ ಬೋಟ್‌ಗೆ ಬಂದ ಮೂವರು ಖದೀಮರು ಬೋಟ್‌ನ ಕಾರ್ಮಿಕರು ಗಾಢ ನಿದ್ರೆಯಲ್ಲಿರುವುದನ್ನು ಗಮನಿಸಿ ಬೋಟ್‌ನ ಸ್ಟೋರೇಜ್‌ನ ಮುಚ್ಚಳ ತೆರೆದು ಅದರೊಳಗೆ ಒಬ್ಬನನ್ನು ಇಳಿಸಿದ್ದರು.

ಅಲ್ಲಿಂದ ಕಳವು ಮಾಡುವಾಗ ಬೋಟ್‌ನ ಕಾರ್ಮಿಕನೋರ್ವನಿಗೆ ಎಚ್ಚರವಾಗಿ ಬೊಬ್ಬೆ ಹಾಕಿದ ವೇಳೆ ಮೇಲೆ ಇದ್ದವರಲ್ಲಿ ಇಬ್ಬರು ಓಡಿ ಹೋಗಿದ್ದು, ಒಬ್ಬ ಸ್ಟೋರೇಜ್‌ನ ಒಳಗೆ ಸಿಕ್ಕಿ ಹಾಕಿಕೊಂಡಿದ್ದ. ಬೋಟ್‌ನ ಕಾರ್ಮಿಕರು ಆತನನ್ನು ಹಿಡಿದು ವಿಚಾರಿಸಿ ಬೋಟು ಮಾಲಕರಿಗೆ ಒಪ್ಪಿಸಿದ್ದಾರೆ. ಈ ಮೂವರು ಗದಗ ಮೂಲದವರೆಂದು ತಿಳಿದು ಬಂದಿದೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *