Share this news

ಮಂಗಳೂರು: ಮಾಜಿ ಶಾಸಕ ಮೊಯಿದ್ದಿನ್‌ ಬಾವಾ ಸಹೋದರ, ಉದ್ಯಮಿ ಮಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸಿಸಿಬಿ ಪೊಲೀಸರು ಬುಧವಾರ (ಅ9) ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಪ್ರಕರಣ ಪ್ರಮುಖ ಮಾಸ್ಟರ್ ಮೈಂಡ್ ಎ2 ಆರೋಪಿ ಅಬ್ದುಲ್ ಸತ್ತಾರ್, ಮುಸ್ತಫಾ ಹಾಗೂ ಶಾಫಿ ಎಂದು ಗುರುತಿಸಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಆರು ಜನರ ಮೇಲೆ ಕಾವೂರು ಠಾಣೆಯಲ್ಲಿ ಎಪ್ಐಆರ್ ದಾಖಲಾಗಿತ್ತು. ಪ್ರಕರಣದ ಎ1 ಆರೋಪಿಯಾಗಿರುವ ಆಯಿಷಾ ಅಲಿಯಾಸ್ ರೆಹಮತ್, ಆಕೆಯ ಪತಿ ಪ್ರಕರಣ ಎ5 ಆರೋಪಿ ಶೊಯೆಬ್ ಮತ್ತು ಸಿರಾಜ್ ನನ್ನು ಸಿಸಿಬಿ ಪೊಲೀಸರು ಈಗಾಗಲೇ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *