ಕಾರ್ಕಳ: ಮಿಯ್ಯಾರು ಗ್ರಾಮದ ಕಂಬಳ ಕ್ರೀಡಾಂಗಣದಲ್ಲಿ ಕೇರಳ ಮೂಲದ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೇರಳ ಮೂಲದ ಕೂಲಿ ಕಾರ್ಮಿಕ ವಿಜೇಶ್ ಎಂಬಾತ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ವಿಜೇಶ್ ಬಜಗೋಳಿ ಸುತ್ತಮುತ್ತಲಿನ ಪರಿಸರದಲ್ಲಿ ಕೂಲಿ ಕಾರ್ಮಿಕರಾಗಿ ದುಡಿಯುತ್ತಿದ್ದು ಮಾನಸಿಕ ಖಿನ್ನತೆಯಿಂದ ನೊಂದು ಶುಕ್ರವಾರ ರಾತ್ರಿ ನೇಣಿಗೆ ಶರಣಾಗಿದ್ದಾರೆ.
ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ