ಕಾರ್ಕಳ: ಬಸ್ಸು ನಿಲ್ದಾಣದ ಬಳಿ ರಸ್ತೆ ಬದಿಯಲ್ಲಿ ಮಲಗಿದ್ದ ವ್ಯಕ್ತಿಯ ಕಾಲಿನ ಮೇಲೆ ಕಾರು ಹರಿದು ವ್ಯಕ್ತಿ ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ತಡರಾತ್ರಿ ಸಂಭವಿಸಿದೆ.
ಕಾರ್ಕಳ ಸಿಟಿ ನರ್ಸಿಂಗ್ ಹೋಂ ಕಡೆಯಿಂದ ಬಂದ ಕಾರು ಬಸ್ ನಿಲ್ದಾಣದ ಬಳಿಯ ಮ್ಯಾಡಿಸ್ ಕಟ್ಟಿ ಕೆಫೆ ಬಳಿ ಮಲಗಿದ್ದ ಗಣೇಶ್ ಎಂಬವರ ಕಾಲಿನ ಮೇಲೆ ಕಾರು ಚಲಿಸಿ ಈ ದುರ್ಘಟನೆ ನಡೆದಿದೆ.
ಕಾರು ಚಾಲಕನ ನಿರ್ಲಕ್ಷ್ಯತನದ ಚಾಲನೆ ವಿರುದ್ಧ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗ್ರಾಮ ಲೆಕ್ಕಿಗರ ನೇಮಕಾತಿ 2024: ಕರ್ನಾಟಕ ಕಂದಾಯ ಇಲಾಖೆಯ ಮೂಲಕ 1000 ಗ್ರಾಮ ಲೆಕ್ಕಿಗರ (VA) ಖಾಲಿ ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ.