

ಕಾರ್ಕಳ,ನ.10: ಅಡಿಕೆ ಮರದಿಂದ ಆಯತಪ್ಪಿ ಕೆಳಕ್ಕೆ ಬಿದ್ದು ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ರೆಂಜಾಳ ಗ್ರಾಮದ ನೆಲ್ಲಿಮನೆ ನಿವಾಸಿ ತನಿಯಪ್ಪ (52ವ) ಎಂಬವರು ನ.4 ರಂದು ಬೆಳಿಗ್ಗೆ ಯಶೋಧರ ಜೈನ್ ಎಂಬವರ ತೋಟದಲ್ಲಿ ಅಡಿಕೆ ಮರಕ್ಕೆ ಹತ್ತಿ ಅಡಿಕೆ ಕೊಯ್ಯುತ್ತಿದ್ದ ವೇಳೆ ಆಯತಪ್ಪಿ ಬಿದ್ದು ಗಾಯಗೊಂಡಿದ್ದರು. ಅವರಿಗೆ ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಎ.ಜೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ತನಿಯಪ್ಪ ಚಿಕಿತ್ಸೆ ಫಲಿಸದೆ ನ.9 ರಂದು ಮೃತಪಟ್ಟಿದ್ದಾರೆ.
ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


































.
.
.
.
.
.
.
.
.
.
.
.
.
.
.
.
.
.
.
.
