
ಬೆಂಗಳೂರು,ಫೆ.20: ರಾಜ್ಯದ ಎಲ್ಲಾ ಮುಜರಾಯಿ ದೇವಸ್ಥಾನಗಳಲ್ಲಿ ಇನ್ನುಮುಂದೆ ಚಿತ್ರೀಕರಣಕ್ಕೆ ಅನುಮತಿ ಕಡ್ಡಾಯಗೊಳಿಸಿ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ದೇವಸ್ಥಾನಗಳಲ್ಲಿ ಯಾವುದೇ ಚಿತ್ರೀಕರಣ ಮಾಡಬೇಕಿದ್ದರೆ ಮುಜರಾಯಿ ಇಲಾಖೆಯ ಅನುಮತಿ ಪಡೆಯುವುದು ಕಡ್ಡಾಯವಾಗಿದೆ.
ರಾಜ್ಯದ ಎಲ್ಲಾ ‘ಎ’ ಮತ್ತು ‘ಬಿ’ ಗ್ರೇಡ್ ದೇವಾಲಯಗಳಲ್ಲಿ ಸಿನಿಮಾ, ಧಾರಾವಾಹಿ, ಸಾಕ್ಷ್ಯಚಿತ್ರ, ಸುದ್ದಿ ವಾಹಿನಿಗಳು ಹೀಗೆ ಯಾವುದೇ ಚಿತ್ರೀಕರಣ ಮಾಡಬೇಕಿದ್ದರೆ ಮುಜರಾಯಿ ಇಲಾಖೆಯ ಅನುಮತಿ ಪಡೆದು ಶುಲ್ಕ ಪಾವತಿಸುವುದು ಕಡ್ಡಾಯ ಎಂಬುದಾಗಿ ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.

.
.
.
.
.
.
.
.
.
.
