
ನವದೆಹಲಿ,ಫೆ.11: ರಾಷ್ಟ್ರಗೀತೆ ‘ಜನಗಣಮನ’ದಂತೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ ಗೀತೆಯನ್ನು ಹಾಡುವುದು ಕೂಡ ಕಡ್ಡಾಯಗೊಳಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದೆ. ರಾಷ್ಟ್ರಗೀತೆಗೂ ಮುನ್ನ ವಂದೇ ಮಾತರಂನ 6 ಚರಣಗಳನ್ನು ಹಾಡಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಹಾಗೆಯೇ ಗೀತೆಯನ್ನು ನುಡಿಸಿದರೆ ಅಥವಾ ಹಾಡಿದರೆ ಎಲ್ಲರೂ ಕಡ್ಡಾಯವಾಗಿ ಎದ್ದು ನಿಲ್ಲಬೇಕು ಎಂದು ತಿಳಿಸಲಾಗಿದೆ. ತ್ರಿವರ್ಣ ಧ್ವಜ ಹಾರಿಸುವಾಗ, ಸರ್ಕಾರಿ ಕಾರ್ಯಕ್ರಮಗಳಿಗೆ ರಾಷ್ಟ್ರಪತಿಗಳ ಆಗಮನದ ಸಮಯದಲ್ಲಿ, ಅವರ ಭಾಷಣಗಳು ಮತ್ತು ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡುವ ಮೊದಲು ಮತ್ತು ನಂತರ, ಹಾಗೆಯೇ ರಾಜ್ಯಪಾಲರ ಆಗಮನ ಮತ್ತು ಭಾಷಣಗಳ ಮೊದಲು ಮತ್ತು ನಂತರವೂ ಸೇರಿದೆ.
6 ಚರಣಗಳಿರುವ ‘ವಂದೇ ಮಾತರಂ’ ಗೀತೆಯನ್ನು ಹಾಡುವುದು ಕಡ್ಡಾಯ ಈ ನಿರ್ದೇಶನವನ್ನು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು, ಸಚಿವಾಲಯಗಳು ಮತ್ತು ಸಾಂವಿಧಾನಿಕ ಸಂಸ್ಥೆಗಳಿಗೆ ಇಂಗ್ಲಿಷ್ ಮತ್ತು ಹಿಂದಿಯಲ್ಲಿ ನೀಡಲಾಗಿದೆ.
ಇಲ್ಲಿಯವರೆಗೆ, ವಂದೇ ಮಾತರಂ ಹಾಡಲು ಯಾವುದೇ ಅಧಿಕೃತ ಶಿಷ್ಟಾಚಾರವಿರಲಿಲ್ಲ. ಆದರೆ ಜನ ಗಣ ಮನ ಗೀತೆಯು ರಾಗ, ಸಮಯ ಮತ್ತು ಗಾಯನದ ಬಗ್ಗೆ ಸ್ಪಷ್ಟ ನಿಯಮಗಳನ್ನು ಹೊಂದಿತ್ತು. ಹಾಡಿನ ವಿಸ್ತೃತ, ಆರು-ಚರಣಗಳ ಆವೃತ್ತಿಯನ್ನು ಇಲ್ಲಿಯವರೆಗೆ ಅಧಿಕೃತ ಕಾರ್ಯಕ್ರಮಗಳಲ್ಲಿ ಹಾಡಿರಲಿಲ್ಲ, ಆದರೆ ಈಗ ಅದನ್ನು ಕಡ್ಡಾಯಗೊಳಿಸಲಾಗಿದೆ.
.
.
.
.
.
.
.
.
.
