ಕಾರ್ಕಳ: ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ/ವೃತ್ತಿಪರ ಬಾಲಕರ ವಿದ್ಯಾರ್ಥಿ ನಿಲಯ ನಿಟ್ಟೆ ಹಾಗೂ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಕಾರ್ಕಳ ಟೌನ್ ಇಲ್ಲಿನ ನಿಲಯಾರ್ಥಿಗಳಿಗೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಯಾವುದೇ ರೀತಿಯ ಆಮಿಷ ಅಥವಾ ಒತ್ತಡಕ್ಕೆ ಒಳಗಾಗದೇ ನಿರ್ಭೀತಿಯಿಂದ ಕಡ್ಡಾಯವಾಗಿ ಮತದಾನ ಮಾಡುವಂತೆ ತಿಳಿಸಿ ಮತದಾನ ಪ್ರತಿಜ್ಞಾ ವಿಧಿಯನ್ನು ಭೋದಿಸಲಾಯಿತು.
ದೇಶದ ಪ್ರತಿಯೊಬ್ಬ ನಾಗರಿಕನೂ ಕೂಡ ಸದೃಢ ಭಾರತ ನಿರ್ಮಾಣಕ್ಕೆ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಮತದಾನದ ಕುರಿತು ಅರಿವು ಮೂಡಿಸಲಾಯಿತು. ಈ ಸಂದರ್ಭದಲ್ಲಿ ಹಾಸ್ಟೆಲ್ ವಾರ್ಡನ್ ವಿನಾಯಕ ಜಿ. ಬಾಳೆಗದ್ದೆ ಹಾಗೂ ಜಯಂತಿ ಜೆ. ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.