ಮಂಗಳೂರು : 1999 ನೇ ಇಸವಿಯಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಾಗೂ 2012 ನೇ ವರ್ಷದಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ 3 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಬಿಡುಗಡೆಗೊಂಡು ಪ್ರಕರಣದ ವಿಚಾರಣೆ ಸಮಯ ಹಾಜರಾಗದೇ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ದಸ್ತಗಿರಿ ಮಾಡುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ.
ಮಂಗಳೂರು ನಾಟೆಕಲ್ ಸರಕಾರಿ ಆಸ್ಪತ್ರೆಯ ಬಳಿ ನಿವಾಸಿ ಅಬ್ದುಲ್ ಹಮೀದ್(50) ಎಂಬಾತನನ್ನು ಧರ್ಮಸ್ಥಳ ಬಳಿಯಲ್ಲಿ ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ಮಂಗಳೂರು ಪೂರ್ವ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.
ಆರೋಪಿ ಅಬ್ದುಲ್ ಹಮೀದ್ 1999 ನೇ ಇಸವಿಯಲ್ಲಿ ಮಂಗಳೂರು ಪೂರ್ವ ಠಾಣಾ ವ್ಯಾಪ್ತಿಯಲ್ಲಿ ಹಾಗೂ 2012 ನೇ ಇಸವಿಯಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಾರ್ಕ್ ಮಾಡಿದ್ದ ಕಾರಿನ ಡೋರ್ ತೆರೆದು ಬೆಲೆಬಾಳುವ ಸೊತ್ತುಗಳನ್ನು ಕಳವು ಮಾಡಿದ ಒಟ್ಟು 3 ಪ್ರಕರಣಗಳಲ್ಲಿ ಭಾಗಿಯಾಗಿ ದಸ್ತಗಿರಿಯಾಗಿ ನ್ಯಾಯಾಲಯದಿಂದ ಜಾಮೀನು ಪಡೆದು ನಂತರ ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಹಾಜರಾಗದೇ ಸುಮಾರು 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ.
ಆರೋಪಿ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್, ಪೊಲೀಸ್ ಇನ್ಸ್ ಪೆಕ್ಟರ್ ರಫೀಕ್ ಕೆ ಎಂ, ಪಿಎಸ್‌ಐ ನರೇಂದ್ರ ಹಾಗೂ ಸಿಸಿಬಿ ಸಿಬ್ಬಂದಿಗಳು ಪಾಲ್ಗೊಂಡಿದ್ದರು.ಸಿಸಿಬಿ ಪೊಲೀಸರ ಕಾರ್ಯವನ್ನು ಪೊಲೀಸ್ ಆಯುಕ್ತರಾದ ಅನುಮಪ್ ಅಗ್ರವಾಲ್, ಐಪಿಎಸ್ ಅವರು ಶ್ಲಾಫಿಸಿದ್ದಾರೆ.
ಬೆಂಗಳೂರು: ಪರಿಸರದ ಮೇಲೆ ಪ್ಲಾಸ್ಟಿಕ್ ಬಳಕೆಯಿಂದ ಆಗುವ ಗಂಭೀರ ಹಾನಿಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರಿ ಕಚೇರಿಗಳಲ್ಲಿ ಮತ್ತು ಸರ್ಕಾರಿ ಕಾರ್ಯಕ್ರಮಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಾಟಲ್ಗಳಲ್ಲಿ ಕುಡಿಯುವ ನೀರು ಕೊಡುವಂತಿಲ್ಲ ಎಂಬ ಆದೇಶವನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು ಎಂದು ಸರ್ಕಾರ ಸುತ್ತೋಲೆ ಹೊರಡಿಸಿದೆ. ಜನವರಿ 31ರಂದೇ ಈ ಸುತ್ತೋಲೆ ಹೊರಡಿಸಲಾಗಿದ್ದು, ಪರ್ಯಾಯ ವ್ಯವಸ್ಥೆ ಬಗ್ಗೆಯೂ ಸಲಹೆ ನೀಡಲಾಗಿದೆ.
ಪ್ಲಾಸ್ಟಿಕ್ ವಸ್ತುಗಳ ಅತಿಯಾದ ಬಳಕೆಯಿಂದ ಆರೋಗ್ಯ ಮತ್ತು ಪರಿಸರದ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮಗಳನ್ನು ತಡೆಯುವ ದೃಷ್ಟಿಯಿಂದ ಸಚಿವಾಲಯ ಸೇರಿದಂತೆ ರಾಜ್ಯಾದ್ಯಾಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಸೌಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾನಿಲಯಗಳು ಹಾಗೂ ಸರ್ಕಾರದಿಂದ ಅನುದಾನ ಪಡೆಯುವಂತಹ ಯಾವುದೇ ಸಂಸ್ಥೆಗಳ ವತಿಯಿಂದ ಏರ್ಪಡಿಸಲ್ಪಡುವ ಸಭೆ ಸಮಾರಂಭಗಳಲ್ಲಿ ಏಕಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲ್ನ ನೀರಿನ ಬಳಕೆ/ ಸರಬರಾಜು ಮಾಡುವುದನ್ನು ನಿಷೇಧಿಸಲಾಗಿದೆ.
ಏಕ ಬಳಕೆಯ ಬಳಕೆಯ ಪ್ಲಾಸ್ಟಿಕ್ ಬಾಟಲ್ ನೀರಿನ ಬಳಕೆ ಹಾಗೂ ಸರಬರಾಜು ಮಾಡುವುದನ್ನು ನಿಷೇಧಿಸಿ 2024ರ ನವೆಂಬರ್ನಲ್ಲಿಯೂ ಸುತ್ತೋಲೆ ಹೊರಡಿಸಲಾಗಿತ್ತು. ಆದಗ್ಯೂ ಸಹ ಸಚಿವಾಲಯವೂ ಸೇರಿದಂತೆ ಯಾವುದೇ ಸರ್ಕಾರಿ ಕಚೇರಿಗಳಲ್ಲಿ ಈ ನಿಯಮವನ್ನು ಪಾಲಿಸದಿರುವುದನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ. ಹೀಗಾಗಿ, ಇನ್ನು ಮುಂದೆ ಮೇಲಿನ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಹಾಗೂ ಪ್ಲಾಸ್ಟಿಕ್ ಬಳಕೆಯ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರಗಳನ್ನು ಬಳಕೆ ಮಾಡುವಂತೆ ಮತ್ತೊಮ್ಮೆ ಸೂಚನೆ ನೀಡಲಾಗುತ್ತಿದೆ ಎಂದು ಸರ್ಕಾರದ ಉಪ ಕಾರ್ಯದರ್ಶಿಗಳು ಸುತ್ತೋಲೆಯಲ್ಲಿ ಉಲ್ಲೇಖಿಸಿದ್ದಾರೆ.