ಮಂಗಳೂರು: ನಗರದ ಮಸಾಜ್ ಸೆಂಟರ್ ಒಂದರಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂದು ಆರೋಪಿಸಿ ರಾಮಸೇನೆ ಸಂಘಟನೆಯಿAದ ದಾಳಿ ಮಾಡಿರುವಂತಹ ಘಟನೆ ಬಿಜೈ ಕೆಎಸ್‌ಆರ್‌ಟಿಸಿ ಬಳಿಯ ಕಲರ್ಸ್ ಹೆಸರಿನ ಮಸಾಜ್ ಸೆಂಟರ್ ನಲ್ಲಿ ನಡೆದಿದೆ.
ಮಸಾಜ್ ಸೆಂಟರ್ ನ ಗಾಜುಗಳನ್ನು ಪುಡಿಗೈದು ಆಕ್ರೋಶ ವ್ಯಕ್ತಪಡಿಸಿದ್ದು, ಮಂಗಳೂರು ನಗರದಾದ್ಯಂತ ಇರುವ ಮಸಾಜ್ ಸೆಂಟರ್‌ಗಳನ್ನು ಮುಚ್ಚುವಂತೆ ಆಗ್ರಹಿಸಿದ್ದಾರೆ.
‘ಮಸಾಜ್ ಸೆಂಟರ್‌ನಲ್ಲಿ ಡ್ರಗ್ಸ್ ನೀಡಿ ವೇಶ್ಯಾವಾಟಿಕೆ ನಡೆಸುತ್ತಿದ್ದರು’ 16, 17 ವರ್ಷದ ಹೆಣ್ಣುಮಕ್ಕಳನ್ನು ಬಳಸಿಕೊಳ್ಳುತ್ತಿದ್ದಾರೆ. ನಮ್ಮ ಕಾರ್ಯಕರ್ತನ ಸಂಬAಧಿ ಯುವತಿಯೊಬ್ಬಳು ಇದರಲ್ಲಿ ಸಿಲುಕಿದ್ದು, ಖಚಿತ ಮಾಹಿತಿ ಮೇರೆಗೆ ಹೆಣ್ಣುಮಕ್ಕಳ ರಕ್ಷಣೆ ಉದ್ದೇಶದಿಂದ ದಾಳಿ ನಡೆಸಿದ್ದೇವೆ ಎಂದು ರಾಮಸೇನೆ ಸಂಸ್ಥಾಪಕ ಪ್ರಸಾದ್ ಅತ್ತಾವರ ಹೇಳಿದ್ದಾರೆ.
ಘಟನೆ ಬಗ್ಗೆ ಉಡುಪಿಯಲ್ಲಿ ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ ಹೇಳಿಕೆ ನೀಡಿದ್ದು, ಯಾವ ಉದ್ದೇಶಕ್ಕೆ ದಾಳಿ ನಡೆಸಿದ್ದಾರೆ ಎಂದು ಗೊತ್ತಿಲ್ಲ. ದಾಳಿ ಮಾಡಿದ್ದವರನ್ನು ತಕ್ಷಣ ಬಂಧಿಸಲು ನಾನು ಸೂಚಿಸಿದ್ದೇನೆ. ಅನೈತಿಕ ಚಟುವಟಿಕೆ ನಡೆಸುವ ಪಾರ್ಲರ್ ಗಳಿದ್ದರೆ ದೂರು ಕೊಡಿ, ಪೊಲೀಸರು ಕ್ರಮ ಕೈಗೊಳ್ಳುತ್ತಾರೆ ಎಂದಿದ್ದಾರೆ.