ಮಂಗಳೂರು: ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಳದ ರಥೋತ್ಸವದ ವೇಳೆ ತೇರು ಮುಗುಚಿ ಬಿದ್ದ ಅವಘಡಕ್ಕೆ ಸಂಬAಧಿಸಿದAತೆ ಇದೀಗ ಜಾರಂದಾಯ ಮತ್ತು ಬಂಟ ದೈವಗಳು ಆಕ್ರೋಶ ವ್ಯಕ್ತಪಡಿಸಿವೆ. ಹೀಗಾಗಿ ಬಪ್ಪನಾಡು ದೇವಸ್ಥಾನದ ಆಡಳಿತ ದೈವಗಳ ಮುನಿಸಿಗೆ ತುತ್ತಾಗಿದೆ. ಇದೆ ಪರಿಸ್ಥಿತಿ ಮುಂದುವರೆದರೆ ಅಪಾಯ ಕಟ್ಟಿಟ್ಟಬುತ್ತಿ ಎಂದು ದೈವಗಳು ಎಚ್ಚರಿಕೆ ಸಹ ನೀಡಿವೆ.
ಮುಲ್ಕಿ ತಾಲೂಕಿನ ಪುರಾಣ ಪ್ರಸಿದ್ಧ ಬಪ್ಪನಾಡು ದುರ್ಗಾಪರಮೇಶ್ವರಿ ದೇವಿಯ ಬ್ರಹ್ಮರಥೋತ್ಸವದ ವೇಳೆ ತೇರು ಎಳೆಯುತ್ತಿದ್ದ ಸಂದರ್ಭದಲ್ಲಿ ದೇವರನ್ನು ಹೊತ್ತು ಸಾಗುತ್ತಿದ್ದ ಬ್ರಹ್ಮರಥ ಏಕಾಏಕಿ ಜನರಿದ್ದ ಕಡೆ ಮುಗುಚಿ ಬಿದಿತ್ತು. ತೇರಿನ ಒಳಗೆ ಕುಳಿತಿದ್ದ ಅರ್ಚಕರು ಸೇರಿದಂತೆ ಸಾವಿರಾರು ಭಕ್ತರು ಪವಾಡ ಸದೃಶ ಎಂಬAತೆ ಪಾರಾಗಿದ್ದರು. ಆದರೆ ಇದೀಗ ಈ ಘಟನೆ ಮಾತ್ರ ತುಳುನಾಡಿನ ಕಾರ್ಣಿಕ ದೈವದ ರೋಷಾವೇಷಕ್ಕೆ ಕಾರಣವಾಗಿದೆ. ಎಲ್ಲರನ್ನೂ ಕಾಪಾಡಿದ್ದು ನಾನೇ, ತಿದ್ದಿಕೊಳ್ಳದಿದ್ದರೆ ಇನ್ನಷ್ಟು ಅಪಾಯ ಎದುರಾಗಲಿದೆ ಎಂದು ದೈವ ಎಚ್ಚರಿಕೆ ನೀಡಿದೆ.
ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಳದ ರಥೋತ್ಸವದ ವೇಳೆ ತೇರು ಮುರಿದು ಬಿದ್ದ ಅವಘಡದ ಬಗ್ಗೆ ಸದ್ಯ ಜಾರಂದಾಯ ಮತ್ತು ಬಂಟ ದೈವಗಳಿಂದ ತಂತ್ರಿಗಳ ಎದುರಲ್ಲೇ ಆಕ್ರೋಶ ಹೊರಹಾಕಿವೆ. ಜಾತ್ರೋತ್ಸವದ ಬಳಿಕ ನಡೆದ ನೇಮೋತ್ಸವದ ವೇಳೆ ದೈವ ಆಕ್ರೋಶ ಹೊರಹಾಕಿದ್ದು, ಬಂಟ ದೈವದ ರೋಷಾವೇಶ ಕಂಡು ಭಕ್ತರು ಬೆಚ್ಚಿ ಬಿದಿದ್ದಾರೆ. ಒಂದು ಜೀವಕ್ಕೂ ಗಾಯ ಆಗೋದಕ್ಕೆ ಬಿಟ್ಟಿಲ್ಲ ನಾನು. ಎಷ್ಟು ಜೀವಕ್ಕೆ ಹಾನಿ ಆಗುತ್ತಿತ್ತು? ಮುಂದಕ್ಕೆ ಎಲ್ಲವನ್ನೂ ಸರಿ ಮಾಡುತ್ತೇನೆ. ತುಂಬಾ ವಿಷಯಗಳು ಇದೆ. ನನಗಿರುವ ಅಧಿಕಾರ ಬೇರೆ ಯಾವ ದೈವಕ್ಕೂ ಇಲ್ಲ. ಪ್ರಶ್ನಾಚಿಂತನೆ ಹಾಕಲೇಬೇಕಾಗಿದೆ. ಆ ಸಂದರ್ಭದಲ್ಲಿ ನಿಮ್ಮ ನಾಲಗೆಯ ಮೂಲಕ ನಾನು ಮಾತನಾಡುತ್ತೇನೆ ಎಂದು ದೈವ ನುಡಿದಿದೆ.
ದೈವರಾಧನೆಯಲ್ಲಿ ಅಹಂಕಾರ, ಪ್ರತಿಷ್ಠೆ ಬಿಡು ಎಂದು ದೈವ ಸಂದೇಶ ನೀಡಿದೆ. ತುಳುನಾಡಿನಲ್ಲಿ ದೇವಸ್ಥಾನಗಳಿಗೂ, ದೈವರಾಧನೆಗೂ ಅವಿನಾಭಾವ ಸಂಬAಧವಿದೆ. ಇಲ್ಲಿ ಯಾವುದೇ ದೇವಸ್ಥಾನಗಳ ಉತ್ಸವಾದಿಗಳನ್ನು ದೈವಗಳೆ ಮುಂದೆ ನಿಂತು ಮಾಡಿಸುದು ಹೀಗಾಗಿ ದೈವಗಳಿಗೆ ಸಾಕಷ್ಟು ಮಹತ್ವವಿದೆ.