Share this news

ಮಂಗಳೂರು: ಕರ್ನಾಟಕದ ವಿವಿಧಡೆ ಡಗ್ಸ್ ಸರಬರಾಜು ಮಾಡುತ್ತಿದ್ದ ನೈಜೀರಿಯಾ ಪ್ರಜೆಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ ಆರೋಪಿಯಿಂದ 6 ಕೋಟಿ ರೂ. ಮೌಲ್ಯದ ಡ್ರಗ್ಸ್ ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಸಿಸಿಬಿ ಪೊಲೀಸರು ವಾರದ ಹಿಂದೆ ಹೈದರ್ ಅಲಿ ಎಂಬಾತನನ್ನು ವಶಕ್ಕೆ ಪಡೆದಿದ್ದರು. ಈತನನ್ನು ವಿಚಾರಣೆಗೆ ಒಳಪಡಿಸಿದಾಗ ನೈಜೀರಿಯಾ ಪ್ರಜೆಯ ಕೈವಾಡ ಇರುವುದು ತಿಳಿದುಬಂದಿದೆ. ನೈಜೀರಿಯಾ ಪ್ರಜೆಯ ಮಾಹಿತಿ ಕಲೆ ಹಾಕಿದ ಸಿಸಿಬಿ ಪೊಲೀಸರು ಆತ ಬೆಂಗಳೂರಿನಲ್ಲಿ ವಾಸವಿರುವುದು ತಿಳಿದಿದೆ. ಕೂಡಲೆ ಕಾರ್ಯಪ್ರವೃತರಾದ ಸಿಸಿಬಿ ಪೊಲೀಸರು ಬೆಂಗಳೂರಿಗೆ ತೆರಳಿ ನೈಜೀರಿಯಾ ಪ್ರಜೆಯನ್ನು ಬಂಧಿಸಿದ್ದಾರೆ. ಆತನ ಬಳಿ ಇದ್ದ 17 ಸಿಮ್ ಕಾರ್ಡ್, ಆತನ ಪಾಸ್‌ಪೋರ್ಟ್ ಸಹಿತ ಎಲ್ಲ ದಾಖಲೆಗಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಆರೋಪಿ ಸಣ್ಣ ಸಣ್ಣ ಪ್ಯಾಕೆಟ್‌ಗಳ ಮೂಲಕ ರಾಜ್ಯದ ಹಲವಡೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದನು. ಚಿಪ್ಸ್, ಬಿಸ್ಕೆಟ್ ಮತ್ತು ಗುಟ್ಕಾ ಪ್ಯಾಕೆಟ್‌ಗಳಲ್ಲಿ ಡ್ರಗ್ಸ್ ಹಾಕಿ ಈ ಪ್ಯಾಕೆಟ್‌ಗಳನ್ನು ಕಸ ಎಸೆಯುವ ಜಾಗದಲ್ಲಿ ಎಸೆಯುತ್ತಿದ್ದನು. ಬಳಿಕ ಪೆಡ್ಲರ್ ಅದರ ಫೋಟೊ ತೆಗೆದು ಪೂರೈಕೆದಾರನಿಗೆ ಕಳುಹಿಸುತ್ತಿದ್ದನು. ಅವರು ಅಲ್ಲಿಂದ ಪ್ಯಾಕೆಟ್ ತೆಗೆದುಕೊಂಡು ಹೋಗುತ್ತಿದ್ದರು. ಇದೀಗ ಮಂಗಳೂರು ನಗರದಲ್ಲಿದ್ದ 50ಕ್ಕೂ ಅಧಿಕ ಡ್ರಗ್ಸ್ ಪ್ಯಾಕೆಟ್‌ಗಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

 

Leave a Reply

Your email address will not be published. Required fields are marked *