Share this news

ಮಂಗಳೂರು: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ತಾಯಿ ಮತ್ತು ಮೂವರು ಮಕ್ಕಳು ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ  ಜಿಲ್ಲೆಯ ಉಳ್ಳಾಲ ತಾಲೂಕಿನ ಮಂಜನಾಡಿಯ ಖಂಡಿಕದಲ್ಲಿ ನಡೆದಿದೆ. ಗಾಯಾಳುಗಳನ್ನು ತಾಯಿ ಖುಬ್ರಾ ಹಾಗೂ ಮೂವರು ಮಕ್ಕಳಾದ ಮಹದಿಯಾ,ಮಝಿಯಾ, ಮಾಯಿಝ ಎಂದು ಗುರುತಿಸಲಾಗಿದೆ. ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿದೆ. ಖಂಡಿಕ ಪ್ರದೇಶದ ಮುತ್ತಲಿಬ್ ಎಂಬುವರ ಮನೆಯಲ್ಲಿ ಮಧ್ಯರಾತ್ರಿ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಮನೆಯ ಮೇಲ್ಚಾವಣಿ ಹಾರಿಹೋಗಿದೆ.

ಕಂಡಿಕ ನಿವಾಸಿ ಮುತ್ತಲಿಬ್ ಎಂಬವರ ಮನೆಯಲ್ಲಿ ಅವರ ಪತ್ನಿ ಖುಬ್ರಾ ಮತ್ತು ಮೂವರು ಮಕ್ಕಳು ಒಂದೇ ಕೊಠಡಿಯಲ್ಲಿ ಮಲಗಿದ್ದರು. ಮಧ್ಯರಾತ್ರಿ ವೇಳೆ ದೊಡ್ಡ ಸದ್ದು ಕೇಳಿಸಿದೆ. ಈ ಘಟನೆಯಲ್ಲಿ ಮನೆಯ ಮೇಲ್ಛಾವಣಿ ಸಂಪೂರ್ಣ ಹಾರಿ ಹೋಗಿದೆ. ಕಿಟಕಿ, ಮಲಗಿದ ಕೊಠಡಿ ಸಂಪೂರ್ಣ ಹಾನಿಯಾಗಿದೆ. ಘಟನೆ ಸಂದರ್ಭ ಸ್ಥಳೀಯ ವ್ಯಕ್ತಿಯೊಬ್ಬರು ಬೊಬ್ಬೆ ಹೊಡೆದಿದ್ದು, ತಕ್ಷಣ ಘಟನಾ ಸ್ಥಳಕ್ಕೆ ಆಗಮಿಸಿದ ಸ್ಥಳೀಯರು ಬೆಂಕಿ ನಂದಿಸಿದ್ದಾರೆ.

ತಾಯಿ ಮಕ್ಕಳು ಮಲಗಿದ ಮಂಚ ಸಂಪೂರ್ಣ ಸುಟ್ಟು ಕರಕಲಾಗಿವೆ. ಈ ಸಂದರ್ಭ ತಾಯಿ ಜೊತೆ ಮಲಗಿದ್ದ ದೊಡ್ಡ ಮಗಳು ಬಾಗಿಲು ತೆರೆದಿದ್ದು, ತಕ್ಷಣ ಸುಟ್ಟ ಗಾಯಗಳಿಂದ ಗಂಭೀರ ಸ್ಥಿತಿಯಲ್ಲಿದ್ದ ತಾಯಿ ಹಾಗೂ ಮೂವರು ಮಕ್ಕಳನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನಾ ಸ್ಥಳಕ್ಕೆ ತಹಶೀಲ್ದಾರ್ ಪುಟ್ಟರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

Leave a Reply

Your email address will not be published. Required fields are marked *