Share this news

ಮಂಗಳೂರು: ಮಂಗಳೂರು ಅಳಪೆ ಪಡೀಲ್ ನಲ್ಲಿರುವ ಅರಣ್ಯ ಇಲಾಖೆಯ ಸಸ್ಯವನ ಬಳಿ ಅಗಸ್ಟ್ 31 ರಂದು ಸಂಜೆ ವೇಳೆಗೆ ಎರಡುವರೆ ವರ್ಷದ ಮಗುವನ್ನು ಅಪಹರಣ ಮಾಡಲಾಗಿದ್ದು, ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಿಂಚಿನ ಕಾರ್ಯಾಚರಣೆ ನಡೆಸಿದ ಪೊಲೀಸರು ಪ್ರಕರಣ ದಾಖಲಾದ ಎರಡು ಗಂಟೆಯೊಳಗೆ ಮಗುವನ್ನು ರಕ್ಷಣೆ ಮಾಡಿ ಆರೋಪಿಯನ್ನು ಬಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಯನ್ನು ಕೇರಳದ ಅನೀಶ್ ಕುಮಾರ್ ಎಂದು ಗುರುತಿಸಲಾಗಿದೆ. ಆರೋಪಿ ಮಗುವಿನೊಂದಿಗೆ ಕಾಸರಗೋಡು ರೈಲ್ವೆ ನಿಲ್ದಾಣದಲ್ಲಿರುವುದಾಗಿ ಮಾಹಿತಿ ಸಿಕ್ಕಿದ ಹಿನ್ನಲೆಯಲ್ಲಿ ಕಾಸರಗೋಡು ಪೊಲೀಸರ ಸಹಕಾರದೊಂದಿಗೆ ಅಂತರಾರಾಜ್ಯ ಆರೋಪಿಯನ್ನು ಅರೆಸ್ಟ್ ಮಾಡಿ ಮಗುವನ್ನು ರಕ್ಷಣೆ ಮಾಡಿದ್ದಾರೆ.
ಆರೋಪಿ ಅನೀಶ್ ಕುಮಾರ್ ತನ್ನ ಊರಿನಿಂದ ಆಗಸ್ಟ್.28 ರಂದು ಮನೆಯಲ್ಲಿ ಗಲಾಟೆ ಮಾಡಿಕೊಂಡು ಮುಂಬೈಗೆ ರೈಲಿನಲ್ಲಿ ಹೋಗಿದ್ದು, ಗೋವಾದಲ್ಲಿ ರೈಲಿನಿಂದ ಇಳಿದು ಈತಮುಂಬೈ ರೈಲನ್ನು ತಪ್ಪಿಸಿಕೊಂಡಿದ್ದಾನೆ. ಬಳಿಕ 31 ರಂದು ಗೋವಾದಿಂದ ಹೊರಟು ಮಂಗಳೂರಿಗೆ ಬಂದು, ಪಡೀಲ್ ಅಳಪೆಯ ಅರಣ್ಯ ಭವನದ ಮುಂಭಾಗದಲ್ಲಿ ಒಂದು ಹೆಣ್ಣು ಮಗು ನಡೆದುಕೊಂಡು ಹೋಗುತ್ತಿದ್ದನ್ನು ನೋಡಿ, ತನಗೆ ಹೆಣ್ಣು ಮಕ್ಕಳಿಲ್ಲವೆಂದು ಆಸೆಯಿಂದ ಈ ಹೆಣ್ಣು ಮಗುವನ್ನು ಕರೆದುಕೊಂಡು ಹೋಗಿದ್ದಾನೆ ಎಂದು ವಿಚಾರಣೆಯಲ್ಲಿ ತಿಳಿದು ಬಂದಿದೆ.

ಬಳಿಕ ಮಂಗಳೂರು ಜಂಕ್ಷನ್ ನ ರೈಲು ನಿಲ್ದಾಣದಿಂದ ಕಾಸರಗೋಡು ಕಡೆಗೆ ಹೋಗುವ ರೈಲಿನಲ್ಲಿ ಹೋಗಿದ್ದಾನೆ. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಕಾಸರಗೋಡಿನ ರೈಲ್ವೇ ಪೊಲೀಸರಿಗೆ ಮಾಹಿತಿ ನೀಡಿ, ತಕ್ಷಣ ಕಾರ್ಯಪ್ರವೃತ್ತರಾಗಿ ಕಂಕನಾಡಿ ನಗರ ಪೊಲೀಸ್ ಠಾಣೆ ಠಾಣಾಧಿಕಾರಿಗಳ ಮಾರ್ಗದರ್ಶನದಂತೆ ಪಿ.ಎಸ್.ಐ ಶಿವಕುಮಾರ.ಕೆ ಮತ್ತು ತಂಡವು ಕಾಸರಗೋಡಿಗೆ ತೆರಳಿ ಕಾಸರಗೋಡಿನ ರೈಲ್ವೇ ಪೊಲೀಸರ ಸಹಾಯದೊಂದಿಗೆ ಆರೋಪಿಯನ್ನು ಹಾಗೂ ಮಗುವನ್ನು ವಶಕ್ಕೆ ಪಡೆದುಕೊಂಡು ಮಗುವಿನ ತಂದೆ ತಾಯಿಯವರಿಗೆ ನೀಡಿದ್ದಾರೆ.
ಸದ್ಯ ಆರೋಪಿಯನ್ನು ªನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

                        

                          

                        

                       

Leave a Reply

Your email address will not be published. Required fields are marked *