Share this news

 

 

ಮಂಗಳೂರು: ಮಂಗಳೂರು ಮೂಲದ ರೌಡಿಶೀಟರ್, ಜೋಡಿಕೊಲೆ ಆರೋಪಿ ನೌಫಲ್ ಬಜಾಲ್ ಯಾನೆ ತುಕ್ಕ ನೌಫಲ್ ಎಂಬಾತ ಉಪ್ಪಳದಲ್ಲಿ ಬರ್ಬರವಾಗಿ ಹತ್ಯೆಯಾಗಿದ್ದಾನೆ ಎನ್ನುವ ಮಾಹಿತಿ ಲಭಿಸಿದೆ.

ಟೋಪಿ ನೌಫಾಲ್ ಮಂಗಳೂರು ನಗರದ ಬಜಾಲ್ ಫೈಸಲ್ ನಗರ ನಿವಾಸಿಯಾಗಿದ್ದು ಮಂಗಳೂರಿನಲ್ಲಿ ಡ್ರಗ್ಸ್ ವಿರುದ್ಧ ಪೊಲೀಸರ ಕಾರ್ಯಾಚರಣೆ ಹೆಚ್ಚಿದ ಬಳಿಕ ಕಾಸರಗೋಡು ಭಾಗದಲ್ಲಿ ಸಕ್ರಿಯವಾಗಿದ್ದ. ಇಂದು ಬೆಳಗ್ಗೆ 8 ಗಂಟೆ ವೇಳೆಗೆ ಉಪ್ಪಳ ಗೇಟ್ ಬಳಿಗೆ ಕರೆಸಿದ್ದ ದುಷ್ಕರ್ಮಿಗಳ ತಂಡ ಅಲ್ಲಿಯೇ ತಲವಾರುಗಳಿಂದ ಕಡಿದು ಹಾಕಿದೆ ಎನ್ನಲಾಗುತ್ತಿದೆ. ಮಂಜೇಶ್ವರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಟೋಪಿ ನೌಫಾಲ್ ಮಂಗಳೂರಿನಲ್ಲಿ ನಟೋರಿಯಸ್ ರೌಡಿ ಜೊತೆಗೆ ಡ್ರಗ್ಸ್ ಸೇವನೆ ಮತ್ತು ವಹಿವಾಟಿನಲ್ಲಿ ಗುರುತಿಸಿಕೊಂಡಿದ್ದ.2017 ರಲ್ಲಿ ಫರಂಗಿಪೇಟೆಯಲ್ಲಿ ನಡೆದ ಜಿಯಾ ಮತ್ತು ಇನ್ನೊಬ್ಬನ ಡಬಲ್ ಮರ್ಡರ್ ಕೇಸಿನಲ್ಲಿ ಪ್ರಮುಖ ಆರೋಪಿಯಾಗಿದ್ದ ಸಂದರ್ಭದಲ್ಲಿ ಮಾರಿಪಳ್ಳ ಜಬ್ಬಾರ್, ತಲ್ಲತ್ ಗ್ಯಾಂಗ್ ಜೊತೆಗೆ ಗುರುತಿಸಿಕೊಂಡಿದ್ದ.

ತಲ್ಲತ್ ಮತ್ತು ಜಬ್ಬಾರ್ ನ್ಯೂಟ್ರಲ್ ಆದಬಳಿಕ ನೌಫಾಲ್ ತನ್ನದೇ ತಂಡ ಕಟ್ಟಿಕೊಂಡು ಕೊಲೆಯತ್ನ, ವಸೂಲಿ, ಡ್ರಗ್ಸ್, ಅಕ್ರಮ ಗೋಲ್ಡ್ ವಹಿವಾಟಿನಲ್ಲಿ ಸಕ್ರಿಯವಾಗಿದ್ದ. ಕಂಕನಾಡಿ ನಗರ, ವಾಮಂಜೂರು, ಸುರತ್ಕಲ್, ಕಾವೂರು ಸೇರಿ ಹಲವಾರು ಕಡೆಗಳಲ್ಲಿ ಕೇಸುಗಳನ್ನು ಹೊಂದಿದ್ದಾನೆ. ಜಿಯಾ ಕೊಲೆ ಕೇಸಿನಲ್ಲಿ ಈತನೇ ಪ್ರಮುಖ ಆರೋಪಿಯಾಗಿದ್ದ. ಇದೀಗ ಉಪ್ಪಳ ಗೇಟ್ ಬಳಿಯಲ್ಲಿ ಕೊಲೆ ಆಗಿರುವುದರಿಂದ ಅಲ್ಲಿನದ್ದೇ ಗ್ಯಾಂಗ್‌ ಈ ಕೃತ್ಯ ನಡೆಸಿರುವ ಸಾಧ್ಯತೆಯಿದೆ. ಮಂಜೇಶ್ವರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *