Share this news

ಮಂಗಳೂರು: ಮಂಗಳೂರಿನ ಜೆಪ್ಪಿನಮೊಗರು ರಾಷ್ಟ್ರೀಯ ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ NSUI ಮುಖಂಡ ಓಂ ಶ್ರೀ ಹಾಗೂ ಕದ್ರಿ ನಿವಾಸಿ ಅಮನ್ ರಾವ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ

ಚಾಲಕನ ಅತೀ ವೇಗಕ್ಕೆ Volkswagen ಕಾರು ನುಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಐವರು ಯುವಕರ ಪೈಕಿ ಇಬ್ಬರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಂಶಿ ಮತ್ತು ಆಶಿಕ್ ಎಂಬವರಿಗೆ ಗಂಭೀರ ಗಾಯಗಳಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೋರ್ವ ವ್ಯಕ್ತಿ ಇಟಲಿ ಮೂಲದ ಜೆರ್ರಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಾರು ತಲಪಾಡಿಯಿಂದ ಮಂಗಳೂರಿಗೆ ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದ್ದು, ಮೃತ ಇಬ್ಬರು ಯುವಕರು ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು. ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

 

 

 

 

 

Leave a Reply

Your email address will not be published. Required fields are marked *