ಮಂಗಳೂರು: ಬೈಕಂಪಾಡಿ ಕೈಗಾರಿಕಾ ವಲಯದಲ್ಲಿ ಕಾರ್ಯಾಚರಿಸುತ್ತಿದ್ದ ಆರೋಮಾಝೆನ್ ಹೆಸರಿನ ಸುಗಂಧ ದ್ರವ್ಯ ತಯಾರಿಕಾ ಕಂಪೆನಿಯಲ್ಲಿ ಇಂದು (ಸೆ.10)ಮುಂಜಾನೆ ಸುಮಾರು 5 ಗಂಟೆಗೆ ಅಗ್ನಿ ಅವಘಡ ಸಂಭವಿಸಿದೆ.
ಅದೃಷ್ಟವಶಾತ್ ಈ ದುರಂತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದ್ದು, ಅಪಾರ ನಷ್ಟ ಸಂಭವಿಸಿದೆ ಎಂದು ಹೇಳಲಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಎಂಸಿಎಫ್, ಎನ್‌ಎಂ ಪಿಎ, ಮತ್ತು ಕದ್ರಿಯ ಅಗ್ನಿ ಶಾಮಕ ದಳ ವಾಹನಗಳು ಸ್ಥಳಕ್ಕೆ ಬಂದು ಬೆಂಕಿ ನಂದಿಸಿವೆ.
ಅಗ್ನಿ ಅವಘಡದ ಕಾರಣ ಪತ್ತೆಹಚ್ಚಲು ತನಿಖೆ ಆರಂಭಿಸಿದ್ದಾರೆ. ಈ ಘಟನೆಗೆ ಸಂಬAಧಿಸಿ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.