Share this news

ಮಂಗಳೂರು: ರೌಡಿಶೀಟರ್ ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯನ್ನು ಅಟ್ಟಾಡಿಸಿ ತಲವಾರಿನಿಂದ ಕಡಿದು ಹತ್ಯೆ ನಡೆಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲಾಪುವಿನಲ್ಲಿ ಭಾನುವಾರ ನಡೆದಿದೆ.

ಉಳ್ಳಾಲ ಕಡಪ್ಪುರ ನಿವಾಸಿ ಸಮೀರ್ (35) ಹತ್ಯೆಯಾದ ವ್ಯಕ್ತಿ. ತಾಯಿ ಜೊತೆಗೆ ಕಲ್ಲಾಪುವಿನ ರೆಸ್ಟೋರೆಂಟ್ ಒಂದಕ್ಕೆ ಊಟಕ್ಕೆಂದು ಬಂದ ಸಂದರ್ಭ ಕಾರಿನಲ್ಲಿ ಹಿಂಬಾಲಿಸಿದ್ದ ತಂಡ ಸಮೀರ್ ಇಳಿಯುತ್ತಿದ್ದಂತೆ ತಲವಾರಿನಿಂದ ದಾಳಿ ನಡೆಸಲು ಮುಂದಾಗಿದೆ. ಅಪಾಯ ಅರಿತ ಸಮೀರ್ ತಕ್ಷಣ ಸ್ಥಳದಿಂದ ಓಡಲು ಯತ್ನಿಸಿದ್ದ. ಈ ವೇಳೆ ಅಟ್ಟಾಡಿಸಿದ ಐದು ಮಂದಿಯ ತಂಡ, ಕಲ್ಲಾಪು ಜಂಕ್ಷನ್ನಿನಿAದ 500 ಮೀ ದೂರದಲ್ಲಿರುವ ವಿ.ಕೆ.ಫರ್ನಿಚರ್ ಹಿಂಭಾಗದವರೆಗೂ ಅಟ್ಟಾಡಿಸಿ, ಅಲ್ಲಿ ತಲವಾರಿನಿಂದ ಕಡಿದು ಹತ್ಯೆ ಮಾಡಿದೆ.

ಘಟನೆಯ ಸಂದರ್ಭದಲ್ಲಿ ಸ್ಥಳೀಯರು ಪೊಲೀಸರ ಜೊತೆಗೆ ಹುಡುಕಾಡಿದ್ದು, ಈ ವೇಳೆ ಅಟ್ಟಾಡಿಸಿಕೊಂಡು ಹೋದ ತಂಡ ಪತ್ತೆಯಾಗಿರಲಿಲ್ಲ. ಬಳಿಕ ಸಮೀರ್ ಓಡಿದ ಸ್ಥಳದಲ್ಲಿ ಹುಡುಕಾಟ ನಡೆಸಿದಾಗ ಮೃತದೇಹ ಪತ್ತೆಯಾಗಿದೆ.

2018ರಲ್ಲಿ ರೌಡಿಶೀಟರ್ ಟಾರ್ಗೆಟ್ ಇಲ್ಯಾಸ್ ಹತ್ಯೆ ನಡೆದಿತ್ತು. ಜೆಪ್ಪುವಿನ ಫ್ಲಾಟ್‌ವೊಂದರಲ್ಲಿ ದಾವೂದ್, ಸಮೀರ್, ರಿಯಾಝ್, ನಮೀರ್, ಅಬ್ದುಲ್ ಖಾದರ್, ಉಮ್ಮರ್ ನವಾಫ್, ಮೊಹಮ್ಮದ್ ನಝೀರ್, ನೌಷಾದ್, ಅಝ್ಗರ್ ಆಲಿ ಈ ಪ್ರಕರಣದ ಆರೋಪಿಗಳಾಗಿದ್ದರು. ಪ್ರಕರಣದಲ್ಲಿ ಸಮೀರ್ ಎರಡನೇ ಆರೋಪಿಯಾಗಿದ್ದು, ದಾವೂದ್ ಮತ್ತು ಸಮೀರ್ ಇಬ್ಬರು ನೇರವಾಗಿ ಫ್ಲ್ಯಾಟ್ ಪ್ರವೇಶಿಸಿ ಇಲ್ಯಾಸ್ ನನ್ನು ಹತ್ಯೆ ನಡೆಸಿರುವುದು ತನಿಖೆಯಲ್ಲಿ ಬಯಲಾಗಿತ್ತು. ಪ್ರಕರಣ ಸಂಬAಧ ಜೈಲುಪಾಲಾದ ಸಮೀರ್ ಕೆಲ ದಿನಗಳ ಹಿಂದಷ್ಟೇ ಬಿಡುಗಡೆಗೊಂಡಿದ್ದ. ಹತ್ಯೆ ಪ್ರತೀಕಾರವಾಗಿ ಸಮೀರ್ ಕೊಲೆ ನಡೆಸಿರಬಹುದು ಮಂಗಳೂರು ನಗರ ಪೊಲೀಸರು ಶಂಕಿಸಿದ್ದಾರೆ. ಭಾನುವಾರ ರಾತ್ರಿ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ತನಿಖೆ ಮುಂದುವರೆದಿದೆ.

                        

                          

                        

                          

 

`

Leave a Reply

Your email address will not be published. Required fields are marked *