Share this news

ಕಾರ್ಕಳ:ಬೈಕ್ ಹಾಗೂ ಟಿಪ್ಪರ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ ಘಟನೆ ಮಂಗಳವಾರ ಸಂಜೆ ಸಂಭವಿಸಿದೆ.
ಕಾರ್ಕಳ ತಾಲೂಕಿನ ಮಂಜರಪಲ್ಕೆ ಸಮೀಪದ ವೀರ ಮಾರುತಿ ದೇವಸ್ಥಾನದ ಬಳಿ ಈ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಪ್ರಶಾಂತ್ ಎಂಬವರು ಗಾಯಗೊಂಡಿದ್ದಾರೆ.
ಅವರು ಮಂಗಳವಾರ ಬೋಳ ವೀರಮಾರುತಿ ದೇವಸ್ಥಾನದ ಬಳಿಯ ಇಳಿಜಾರು ರಸ್ತೆಯಲ್ಲಿ ಬೈಕಿನಲ್ಲಿ ಬರುತ್ತಿದ್ದಾಗ ಬೈಕ್ ಸ್ಕಿಡ್ಡಾಗಿ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಟಿಪ್ಪರ್ ಲಾರಿಗೆ ಡಿಕ್ಕಿಯಾಗಿದೆ. ಈ ಅಪಘಾತದಿಂದ ಪ್ರಶಾಂತ್ ಅವರ ಕೈಕಾಲುಗಳಿಗೆ ಗಂಭೀರ ಗಾಯಗಳಾಗಿವೆ. ಬೈಕ್ ಸವಾರನ ಮಿತಿಮೀರಿದ ವೇಗದಿಂದ ಈ ಅಪಘಾತ ನಡೆದಿದೆ ಎನ್ನಲಾಗಿದೆ.
ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

 

 

 

                        

                          

 

Leave a Reply

Your email address will not be published. Required fields are marked *