

ಕಾರ್ಕಳ, ನ.21:ವಿಧಾನಪರಿಷತ್ತಿನ ಮುಖ್ಯ ಸಚೇತಕರಾಗಿ KPCC ಕಾರ್ಯಾಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ನೇಮಕಗೊಂಡಿದ್ದು, ಕಾರ್ಕಳ ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ ಶೆಟ್ಟಿ ಅಭಿನಂದನೆ ಸಲ್ಲಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು, ಪಕ್ಷದ ಬಲವರ್ಧನೆಗೆ ನಿರಂತರವಾಗಿ ಶ್ರಮಿಸುತ್ತಿರುವ ಮಂಜುನಾಥ ಭಂಡಾರಿ ಅವರಿಗೆ ಈ ಮಹತ್ವದ ಜವಾಬ್ದಾರಿ ನೀಡಿರುವುದು ಅವರ ಪಕ್ಷನಿಷ್ಠೆ, ಸಂಘಟನಾ ಸಾಮರ್ಥ್ಯ ಹಾಗೂ ಅನುಭವಕ್ಕೆ ಸಂದ ಗೌರವವಾಗಿದೆ. ಶಿಕ್ಷಣ ತಜ್ಙರು, ಚಿಂತಕರೂ ಆಗಿರುವ ಮಂಜುನಾಥ ಭಂಡಾರಿಯವರು ವಿಧಾನಪರಿಷತ್ ಮುಖ್ಯ ಸಚೇತಕರಾಗಿರುವುದು ಅತ್ಯಂತ ಸಂತಸದ ವಿಚಾರವಾಗಿದೆ.
ನೂತನ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿ, ರಾಜ್ಯದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಮೂಲಕ ಇನ್ನಷ್ಟು ಉತ್ತಮ ಸೇವೆ ಸಲ್ಲಿಸಲಿ ಎಂದು ಹಾರೈಸುತ್ತೇನೆ ಎಂದು ಉದಯ ಶೆಟ್ಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.





.
.
.
.
.
.
.
.
.
.
.
.
.
.
.
.
.
.
.
.
