ಕಾರ್ಕಳ: ಕಾರ್ಕಳ-ಹೆಬ್ರಿ ತಾಲೂಕು ಮರಾಠಿ ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆ, ಸಾಮೂಹಿಕ ಸತ್ಯನಾರಾಯಣ ಪೂಜೆ, ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ, ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ, ತಾಲೂಕಿನ ವಿಶೇಷ ಸಾಧಕರಿಗೆ ಸನ್ಮಾನ ಹಾಗೂ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಗರಿಷ್ಠ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭವು ಅಕ್ಟೋಬರ್ 19ರಂದು ಬೆಳಿಗ್ಗೆ 8.30ರಿಂದ ದುರ್ಗ ಶ್ರೀ ಲಕ್ಷ್ಮೀ ಅಂಬಾಭವಾನಿ ದೇವಸ್ಥಾನದಲ್ಲಿ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಸಂಘದ ಸದಸ್ಯರು, ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ,ದೇವರ ಅನುಗ್ರಹಕ್ಕೆ ಪಾತ್ರರಾಗಿ, ಕಾರ್ಯಕ್ರಮದ ಯಶಸ್ಸಿಗೆ ಕೈಜೋಡಿಸುವಂತೆ ಸಂಘದ ಪ್ರಕಟಣೆ ತಿಳಿಸಿದೆ.