Share this news

ಪುತ್ತೂರು: ರಾಜ್ಯದಲ್ಲಿ ಸುರಿಯುತ್ತಿರುವ ರಣಭೀಕರ ಮಳೆಗೆ ಜನ ತತ್ತರಿಸಿದ್ದು, ಅಲ್ಲಲ್ಲಿ ಭೂಕುಸಿತಗಳು ಸಂಭವಿಸುತ್ತಿದ್ದು ಜನ ಭಯದಲ್ಲೇ ದಿನ ಕಳೆಯುತ್ತಿದ್ದಾರೆ. ಇದೀಗ ಇಂದು ಮುಂಜಾನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಗುಡ್ಡ ಕುಸಿದ ಪರಿಣಾಮ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದು, ಮಣ್ಣು ತೆರವು ಕಾರ್ಯಾಚರಣೆ ಪ್ರಗತಿಯಲ್ಲಿದೆ.

ಪುತ್ತೂರಿನ ಬೈಪಾಸ್ ರಸ್ತೆಯ ತೆಂಕಿಲ ಎಂಬಲ್ಲಿ ಹೆದ್ದಾರಿ ಮೇಲೆ ಶುಕ್ರವಾರ ಮುಂಜಾನೆ ಗುಡ್ಡ ಕುಸಿದು ಬಿದ್ದಿದ್ದು, ಮಡಿಕೇರಿ ಹಾಗೂ ಮೈಸೂರು ಕಡೆಗೆ ಪ್ರಯಾಣಿಸುವವರಿಗೆ ಬದಲಿ ರಸ್ತೆಯಾಗಿ ಪುತ್ತೂರು ಸಿಟಿ ಮೂಲಕ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ನಸುಕಿನ ಜಾವದಲ್ಲಿ ಗುಡ್ಡ ಕುಸಿತ ಉಂಟಾಗಿದ್ದರಿAದ ವಾಹನ ಸಂಚಾರ ಕಡಿಮೆಯಿದ್ದ ಕಾರಣ ಭಾರೀ ಅನಾಹುತ ತಪ್ಪಿದೆ. ಸದ್ಯ ಹೆದ್ದಾರಿ ಮೇಲೆ ಬಿದ್ದಿರುವ ಮಣ್ಣು ತೆರವು ಮಾಡುವ ಕಾರ್ಯಾಚರಣೆ ನಡೆಯುತ್ತಿದೆ.

                        

                          

                        

                          

 

`

Leave a Reply

Your email address will not be published. Required fields are marked *