Share this news

ಬೆಂಗಳೂರು,ಮಾ. 25: ಕರ್ನಾಟಕ ವಿಧಾನಸಭೆಯಲ್ಲಿ ಮಂಗಳವಾರ ಮಂಡನೆಯಾದ ಮಹಾಲೇಖಾಪರಿಶೋಧಕರ (CAG) ವರದಿಯಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅನುಷ್ಠಾನದಲ್ಲಿ ಭಾರಿ ಅಕ್ರಮಗಳು ನಡೆದಿರುವುದು ಬಹಿರಂಗಗೊಂಡಿದೆ. ಯೋಜನೆಯಲ್ಲಿ ಈಗಾಗಲೇ ಪೂರ್ಣಗೊಂಡ ಮನೆ ಕಾಮಗಾರಿಗಳಿಗೆ ಮತ್ತೆ ಹಣ ಪಾವತಿ ಮಾಡಿರುವುದು, ಅರ್ಹತೆಯಿಲ್ಲದವರಿಗೆ ಹಣ ನೀಡಿರುವುದು ಹಾಗೂ ಯಾವುದೇ ಕೆಲಸ ಮಾಡದೇ ಕಾರ್ಮಿಕರಿಗೆ ವೇತನ ನೀಡಿರುವ ಅಂಶ ಬೆಳಕಿಗೆ ಬಂದಿವೆ.

ಕೆಲವು ಸ್ಥಳಗಳಲ್ಲಿ ನಿರ್ಮಾಣ ಕಾರ್ಯವೇ ನಡೆಯದಿದ್ದರೂ ಕಾರ್ಮಿಕರಿಗೆ ವೇತನ ಪಾವತಿಸಲಾಗಿದೆ. ಅಲ್ಲದೆ, ನಿಯಮಿತ ಮಿತಿಗಿಂತ ಹೆಚ್ಚು ಹಣ ನೀಡಿರುವುದೂ ವರದಿಯಲ್ಲಿ ಉಲ್ಲೇಖವಾಗಿದೆ. ನರೇಗಾ ಅಡಿ ಅಂಗೀಕೃತ ಯೋಜನೆಗಳಲ್ಲಿ ಬಹಳಷ್ಟು ಪ್ರಾರಂಭವಾಗದೇ ಉಳಿದಿದ್ದರೆ, ಕೆಲವು ಯೋಜನೆಗಳು ಒಂದು ವರ್ಷಕ್ಕೂ ಹೆಚ್ಚು ಕಾಲ ಪೂರ್ಣಗೊಳ್ಳದೇ ಉಳಿದಿವೆ.
ಇನ್ನೊಂದೆಡೆ, 13 ಗ್ರಾಮ ಪಂಚಾಯಿತಿಗಳಲ್ಲಿ 17 ಕೆಲಸಗಳಲ್ಲಿ ತೊಡಗಿದ್ದ 497 ಕಾರ್ಮಿಕರಿಗೆ, ಎಲ್ಲಾ ದಾಖಲೆಗಳನ್ನು ಸಲ್ಲಿಸಿದರೂ 10.98 ಲಕ್ಷ ರೂ. ವೇತನ ಪಾವತಿಸದೇ ಇರುವುದಾಗಿ ಸಿಎಜಿ ವರದಿ ತಿಳಿಸಿದೆ.

ಕೆಲವು ಕಾಮಗಾರಿಗಳಲ್ಲಿ ಅಂದಾಜು ಪರಿಷ್ಕರಣೆ ಮಾಡದೇ ಹೆಚ್ಚುವರಿ ವೆಚ್ಚ ಮಾಡಲಾಗಿದೆ. ಜೊತೆಗೆ, ವೈಯಕ್ತಿಕ ಕಾಮಗಾರಿಗಳಲ್ಲಿ ವಸ್ತು ವೆಚ್ಚವನ್ನು ಲಾಭಾರ್ಥಿಗಳಿಗೆ ನೀಡಬೇಕಾದಲ್ಲಿ ನೇರವಾಗಿ ಮಾರಾಟಗಾರರಿಗೆ ಪಾವತಿಸಿರುವುದು ಸರ್ಕಾರದ ನಿಯಮಗಳಿಗೆ ವಿರುದ್ಧವಾಗಿದೆ ಎಂದು ಸಿಎಜಿ ವರದಿ ತಿಳಿಸಿದೆ.

ಒಟ್ಟಿನಲ್ಲಿ, ಗ್ರಾಮೀಣ ಉದ್ಯೋಗ ಸೃಷ್ಟಿ ಹಾಗೂ ಬಡಜನರ ಆರ್ಥಿಕ ಭದ್ರತೆ ಗುರಿಯಾಗಿಟ್ಟುಕೊಂಡ ಎಂನರೇಗಾ ಯೋಜನೆಯಲ್ಲಿ ಇಂತಹ ಅಕ್ರಮಗಳು ನಡೆದಿರುವುದು ಆತಂಕದ ವಿಚಾರ. ಈ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಅಗತ್ಯವಿದೆ ಎನ್ನುವ ಆಗ್ರಹ ಕೇಳಿಬಂದಿದೆ.

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

Leave a Reply

Your email address will not be published. Required fields are marked *