ಬೆಂಗಳೂರು : ಗುಜರಾತಿನ ಅಹಮದಾಬಾದ್ ಸ್ಟೇಡಿಯಂನಲ್ಲಿ ನಡೆದ 18ನೇ ಆವೃತ್ತಿಯ ಐಪಿಎಲ್ ಫೈನಲ್ ಗೆದ್ದು ಚಾಂಪಿಯನ್ ಆಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ಬೆಂಗಳೂರು ನಗರಕ್ಕೆ ಬಂದಿಳಿದಿದ್ದು, ಅವರನ್ನು ನೋಡಲು ಲಕ್ಷಾಂತರ ಸಂಖ್ಯೆಯಲ್ಲಿ RCB ಅಭಿಮಾನಿಗಳು ಚಿನ್ನಸ್ವಾಮಿ ಸ್ಟೇಡಿಯಂನತ್ತ ನುಗ್ಗಿದ ಪರಿಣಾಮ ಏಕಾಏಕಿ ಕಾಲ್ತುಳಿತ ಸಂಭವಿಸಿದೆ. ಇದೀಗ ಈ ಸಂಭ್ರಮಾಚರಣೆ ಸಂದರ್ಭದಲ್ಲಿ ಕಾಲ್ತುಳಿತದಿಂದ 6 ಜನ ಮೃತಪಟ್ಟಿದ್ದಾರೆ.
ವಿಧಾನಸೌಧ ಮೆಟ್ಟಿಲುಗಳ ಮೇಲೆ ಅಭಿನಂದನಾ ಕಾರ್ಯಕ್ರಮ ನಡೆಯುತ್ತಿದೆ. ಆರ್ಸಿಬಿ ಆಟಗಾರರನ್ನು ಸ್ವಾಗತಿಸಲು ಅಭಿಮಾನಿಗಳು ಕಿಕ್ಕಿರಿದು ಸೇರಿದ್ದಾರೆ. ಈ ನಡುವೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಅಭಿಮಾನಿಗಳು ಭಾರೀ ಸಂಖ್ಯೆಯಲ್ಲಿ ಸೇರಿದ್ದು, ಗೇಟ್ ಸಂಖ್ಯೆ6 ಹಾಗೂ ನಂ.12 ರಲ್ಲಿ ಕಾಲ್ತುಳಿತ ಉಂಟಾಗಿದ್ದು, ಈ ವೇಳೆ ಕೆಲ ಅಭಿಮಾನಿಗಳು ಅಸ್ವಸ್ಥರಾಗಿದ್ದಾರೆ. ಈ ವೇಳೆ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಕಾಲ್ತುಳಿತದಲ್ಲಿ ಯುವಕನೋರ್ವನಿಗೆ ಕಾಲು ಮುರಿತವಾಗಿದೆ. ನಾಲ್ವಾರು ಸಾವನ್ನಪ್ಪಿದ್ದು, 15 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ.