ಕೊಲ್ಕೋತಾ: ಪಶ್ಚಿಮ ಬಂಗಾಳದ ಮುಸ್ಲಿಂ ಪ್ರಾಬಲ್ಯದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಸಿದ ಪ್ರತಿಭಟನೆಯಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು ಈ ಹಿಂಸಾಚಾರಕ್ಕೆ ಸಂಬAಧಿಸಿದAತೆ 110 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಪ್ರತಿಭಟನಾಕಾರರು ಸಿಕ್ಕಸಿಕ್ಕ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಇದರಿಂದಾಗಿ ಪಶ್ಚಿಮ ಬಂಗಾಳದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.
ಶುಕ್ರವಾರ ಮಧ್ಯಾಹ್ನ ವಕ್ಫ್ ಕಾಯ್ದೆ ತಿದ್ದುಪಡಿ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆದಿತ್ತು. ಸಂಜೆ ಬಳಿಕ ನಡೆದ ಪ್ರತಿಭಟನೆ ಹಿಂಸಚಾರಕ್ಕೆ ತಿರುಗಿದೆ. ಘಟನೆಯ ಹಿನ್ನೆಲೆಯಲ್ಲಿ ಕನಿಷ್ಠ ಎರಡು ರೈಲುಗಳ ಸಂಚಾರವನ್ನು ರದ್ದು ಮಾಡಲಾಗಿದೆ. ದಾಳಿಯಲ್ಲಿ ಕೆಲವು ಪ್ರಯಾಣಿಕರು ಮತ್ತು ಏಳರಿಂದ ಹತ್ತು ಪೊಲೀಸರು ಗಾಯಗೊಂಡಿದ್ದಾರೆ. ಹಿಂಸಾಚಾರವನ್ನು ನಿಯಂತ್ರಿಸಲು ಗಡಿ ಭದ್ರತಾ ಪಡೆಗಳ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ
ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧ ಸುತಿ ಮತ್ತು ಶಂಶೇರ್‌ಗAಜ್ ಪ್ರದೇಶಗಳಲ್ಲಿ ಪ್ರತಿಭಟನೆ ಉಗ್ರ ಸ್ವರೂಪ ಪಡೆದುಕೊಂಡಿತ್ತು. ಪೊಲೀಸರು ಪ್ರತಿಭಟನಾಕಾರರನ್ನು ಎಷ್ಟೇ ಪ್ರಯತ್ನಪಟ್ಟರೂ ಕೂಡ ಹತ್ತಿಕ್ಕಲು ಸಾಧ್ಯವಾಗದೇ ವಾತಾವರಣವೇ ಬಿಗುವಾಗಿತ್ತು. ಈ ಸಂದರ್ಭದಲ್ಲಿ ಆಕ್ರೋಶಗೊಂಡ ಪ್ರತಿಭಟನಾ ನಿರತರನ್ನು ಹತ್ತಿಕ್ಕಲು ಬಂದ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಅಲ್ಲದೆ ವಾಹನ ಹಾಗೂ ರೈಲು ಸಂಚಾರಕ್ಕೆ ಅಡ್ಡಿಪಡಿಸಿದ್ದು ಕಂಡು ಬಂದಿದೆ. ಈ ಸಂದರ್ಭದಲ್ಲಿ ಸುಮಾರು 10 ಪೊಲೀಸರು ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಹಿಂಸಾಚಾರಕ್ಕೆ ಸಂಬAಧಿಸಿದAತೆ ಸುತಿಯಿಂದ ಸುಮಾರು 70 ಜನರನ್ನು ಮತ್ತು ಸಂಸರ್‌ಗAಜ್‌ನಿAದ 41 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹಿಂಸಾಚಾರ ಪೀಡಿತ ಈ ಸ್ಥಳಗಳಲ್ಲಿ ಶನಿವಾರ ಬೆಳಿಗ್ಗೆ ಪರಿಸ್ಥಿತಿ ಉದ್ವಿಗ್ನವಾಗಿತ್ತು, ಆದರೆ ಯಾವುದೇ ಅಹಿತಕರ ಘಟನೆ ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹೆಚ್ಚು ಹಾನಿಗೊಳಗಾದ ಮುರ್ಷಿದಾಬಾದ್ ಜಿಲ್ಲೆಯಲ್ಲಿ, ಹಿಂಸಾಚಾರ ನಡೆದ ಸ್ಥಳಗಳಲ್ಲಿ ನಿಷೇಧಾಜ್ಞೆಗಳನ್ನು ವಿಧಿಸಲಾಗಿದೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ