ಬೆಳಗಾವಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ ಪ್ರಚಾರ ಭರಾಟೆ ಜೋರಾಗಿದೆ. ಬಿರುಸಿನ ಪ್ರಚಾರ ಸಭೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೀತಿ ಸಂಹಿತೆ ಉಲ್ಲಂಘಿಸಿ ಆಶಾ ಕಾರ್ಯಕರ್ತೆಯರ ಸಭೆ ನಡೆಸಿ ತಮ್ಮ ಮಗನ ಪರವಾಗಿ ಮತ ಹಾಕಿಸುವಂತೆ ಸೂಚಿಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.
ಪುತ್ರ ಮೃಣಾಲ್ಗೆ ಲೋಕಸಭಾ ಟಿಕೆಟ್ ಬಹುತೇಕ ಫೈನಲ್ ಆಗಿರುವ ಹಿನ್ನೆಲೆಯಲ್ಲಿ ಕಾರ್ಯಕರ್ತೆಯರಲ್ಲಿ ಮೃಣಾಲ್ ಪರವಾಗಿ ಕೆಲಸ ಮಾಡುವಂತೆ ಸಚಿವೆ ಸೂಚಿಸುವ ಮೂಲಕ ನೀತಿ ಸಂಹಿತೆ ಉಲ್ಲಂಘಿಸಿ ಅಧಿಕಾರ ದುರುಪಯೋಗ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಭೆ ನಡೆಸುತ್ತಿದ್ದ ಕಚೇರಿಯ ಮೇಲೆ ಚುನಾವಣಾಧಿಕಾರಿಗಳು, ಫ್ಲೈಯಿಂಗ್ ಸ್ಕ್ವಾಡ್ ಹಠಾತ್ ದಾಳಿ ನಡೆಸಿದೆ. ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಈ ವೇಳೆ, ಚುನಾವಣಾ ನೀತಿಸಂಹಿತೆ ಉಲ್ಲಂಘಿಸಿ ಸಭೆ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಸಭೆಯಲ್ಲಿದ್ದವರ ಎಲ್ಲರ ಮಾಹಿತಿ ಪಡೆದು ನಂತರ ಅವರನ್ನು ಅಧಿಕಾರಿಗಳು ವಾಪಸ್ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ