Share this news

ಬೆಂಗಳೂರು, ನ.18: ಗ್ರಾಮೀಣ ಭಾಗದ ಜನರಿಗೆ ಆಸ್ತಿ ಹಕ್ಕು ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರದ ಆರನೇ ಗ್ಯಾರಂಟಿ ‘ಭೂಗ್ಯಾರಂಟಿ’ ಯೋಜನೆಯಡಿ ಇ-ಸ್ವತ್ತು 2.0 ಯೋಜನೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ಚಾಲನೆ ನೀಡಿದ್ದಾರೆ. ದಾಖಲೆಗಳಿಲ್ಲದ ಆಸ್ತಿಗಳಿಗೂ ಇ-ಸ್ವತ್ತು ನೀಡುವ ಪ್ರಕ್ರಿಯೆ ಆರಂಭವಾಗಿದ್ದು, ಮನೆ ಮನೆಗೆ ಭೇಟಿ ನೀಡಿ ಅಧಿಕಾರಿಗಳು ಆಸ್ತಿ ದಾಖಲೆ ವಿತರಿಸಲಿದ್ದಾರೆ. 2027ರ ಅಂತ್ಯದ ವೇಳೆಗೆ ಬಾಕಿ ಇರುವ ಎಲ್ಲ ಇ-ಸ್ವತ್ತು ವಿತರಿಸುವ ಗುರಿ ಸರ್ಕಾರ ಹೊಂದಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ವಿಕಾಸಸೌಧದ ತಮ್ಮ ಕಚೇರಿಯಲ್ಲಿಂದು ಭೂಗ್ಯಾರಂಟಿ ಇ-ಸ್ವತ್ತು ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಗ್ರಾಮೀಣ ಭಾಗದಲ್ಲಿ ತಲೆತಲಾಂತರಗಳಿAದ ವಾಸಿಸುತ್ತಿರುವ ಅನೇಕ ಕುಟುಂಬಗಳಿಗೆ ಆಸ್ತಿ ದಾಖಲೆಗಳಿಲ್ಲ. ಹಳೆಯ ದಾಖಲೆಗಳು ನಾಶವಾಗಿರುವುದರಿಂದ ಹಕ್ಕುಪತ್ರ ನೀಡಲು ಸಮಸ್ಯೆಯಾಗಿತ್ತು. ಈ ಹಿನ್ನೆಲೆಯಲ್ಲಿ ದಾಖಲೆ ವಿತರಣೆಗಾಗಿ ಸಮಿತಿ ರಚಿಸಲಾಗಿದ್ದು, ಸಮಿತಿಯ ವರದಿ ಆಧರಿಸಿ ನಿಯಮಗಳಲ್ಲಿ ಮಾರ್ಪಾಡು ಮಾಡಲಾಗಿದೆ. ಇದೀಗ ದಾಖಲೆಗಳಿಲ್ಲದಿದ್ದರೂ ಇ-ಸ್ವತ್ತು ನೀಡಲು ಚಾಲನೆ ನೀಡಲಾಗಿದೆ ಎಂದರು.
ರಾಜ್ಯದಲ್ಲಿ ಶೇ.61ರಷ್ಟು ಜನರು ಗ್ರಾಮೀಣ ಪ್ರದೇಶದಲ್ಲಿದ್ದು, ಇ-ಸ್ವತ್ತು ಪಡೆಯುವಲ್ಲಿ ಸಾಕಷ್ಟು ವಿಳಂಬ ಆಗುತ್ತಿತ್ತು. ಈ ತೊಡಕು ನಿವಾರಿಸಲು ತಾವು ಸಚಿವರಾದ ಬಳಿಕ ಪಂಚಾಯತ್ ರಾಜ್ ಇಲಾಖೆಯ ಕಾರ್ಯದರ್ಶಿಯವರ ನೇತೃತ್ವದಲ್ಲಿ ಬೆಂಗಳೂರು ನಗರ, ಮಂಗಳೂರು, ಕಲ್ಬುರ್ಗಿ ಮತ್ತು ಬೆಳಗಾವಿ ಜಿಲ್ಲಾ ಪಂಚಾಯತಿಗಳ ಸಿಇಓಗಳನ್ನು ಒಳಗೊಂಡ ಪಂಚ ಸದಸ್ಯರ ಸಮಿತಿ ರಚಿಸಿ, ಸಮಿತಿಯ ಶಿಫಾರಸಿನಂತೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯಿತಿಗಳ ತೆರಿಗೆ, ದರ ಮತ್ತು ಶುಲ್ಕಗಳು) ನಿಯಮಗಳು, 2025ಕ್ಕೆ ತಿದ್ದುಪಡಿ ತರಲಾಗಿದೆ ಎಂದು ಮಾಹಿತಿ ನೀಡಿದರು.

ಗ್ರಾಮೀಣ ಭಾಗದಲ್ಲಿ ಪ್ರತಿಯೊಬ್ಬ ನಾಗರಿಕರಿಗೂ ಸುರಕ್ಷಿತ, ನಿಖರ, ಡಿಜಟಲೀಕರಿಸಿದ ಮತ್ತು ಭೌಗೋಳಿಕವಾಗಿ ಉಲ್ಲೇಖಿಸಲಾದ ಭೂಮಿ ಮತ್ತು ಆಸ್ತಿ ದಾಖಲೆಗಳನ್ನು ವಿತರಿಸಲು ಭೂ-ಗ್ಯಾರಂಟಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಮೊದಲ ಹಂತದಲ್ಲಿ ರಾಜ್ಯದ ಎಲ್ಲಾ 5927 ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ವಿಶೇಷವಾಗಿ ಗ್ರಾಮಠಾಣ ಪ್ರದೇಶದಲ್ಲಿ ಇ-ಸ್ವತ್ತು ನೀಡಲು ಪ್ರಕ್ರಿಯೆ ಆರಂಭಿಸಲಾಗಿದೆ. ಅದೇ ರೀತಿ ಕಂದಾಯ ಭೂಮಿಯಲ್ಲಿ ಅಭಿವೃದ್ಧಿ ಪಡಿಸಲಾದ ಪರಿವರ್ತನೆ ಆದ ಭೂಮಿ ಮತ್ತು ಪರಿವರ್ತನೆ ಆಗದ ಭೂಮಿಯಲ್ಲಿ ಮನೆ ನಿರ್ಮಿಸಿಕೊಂಡಿರುವವರಿಗೂ ಇ-ಸ್ವತ್ತು ನೀಡಲು ಕ್ರಮ ವಹಿಸಲಾಗಿದೆ. ಇದರಲ್ಲಿ ಮೊದಲ ಹಂತದಲ್ಲಿ ಪರಿವರ್ತನೆ ಆದ ಭೂಮಿಯಲ್ಲಿ ಅಭಿವೃದ್ಧಿ ಪಡಿಸಲಾದ ಬಿ ಖರಾಬು ಭೂಮಿ ಇಲ್ಲದ ಸರ್ವೆ ನಂಬರ್ ಸ್ವತ್ತುಗಳಿಗೂ ಇ-ಸ್ವತ್ತು ನೀಡಲಾಗುವುದು. ನಂತರ ಭೂಪರಿವರ್ತನೆ ಆಗದ ಭೂಮಿಯ ಸ್ವತ್ತಿಗೂ ಇ-ಸ್ವತ್ತು ನೀಡಲು ಕೆಲವೇ ತಿಂಗಳುಗಳಲ್ಲಿ ನಿಯಮಗಳಿಗೆ ಮಾರ್ಪಾಡು ಮಾಡಿ, ಕ್ರಮ ವಹಿಸಲಾಗುವುದು ಎಂದು ಮಾಹಿತಿ ನೀಡಿದರು.

 

 

.

 

.

.

.

 

 

 

 

 

 

 

 

 

 

 

 

 

.

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

                                       

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

Leave a Reply

Your email address will not be published. Required fields are marked *