Share this news

ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ  ಬಿಜೆಪಿ ವಿಧಾನಪರಿಷತ್ ಸದಸ್ಯ ಸಿಟಿ ರವಿ ಬಂಧನವಾಗಿದೆ. ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಿಕೊಂಡಿರುವ ಬೆಳಗಾವಿಯ ಹಿರೇಬಾಗೇವಾಡಿ ಪೊಲೀಸರು, ಸುವರ್ಣಸೌಧದಲ್ಲೇ ಸಿಟಿ ರವಿ ಅವರನ್ನು ಬಂಧಿಸಿದ್ದಾರೆ.ಇದರಿಂದ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.

ಎಫ್‌ಐಆರ್ ದಾಖಲಾದ ಹಿರೇಬಾಗೇವಾಡಿ ಪೊಲೀಸ್ ಠಾಣೆ ಬಿಟ್ಟು ಸಿಟಿ ರವಿ ಅವರನ್ನು ಬಂಧಿಸಿ ನಂದಗಡ ಪೊಲೀಸ್ ಠಾಣೆಗೆ ಕರೆದುಕೊಂಡು ಕರೆದೊಯ್ಯಲಾಗಿದೆ.ಹಿರೇಬಾಗೇವಾಡಿ ಠಾಣೆ ದೂರುದಾರೆ ಲಕ್ಷ್ಮೀ ಹೆಬ್ಬಾಳ್ಕರ್​​ ಕ್ಷೇತ್ರದ ವ್ಯಾಪ್ತಿಯಲ್ಲಿರುವುದರಿಂದ ಅವರ ಬೆಂಬಲಿಗರು ಆಗಮಿಸುವ ಸಾಧ್ಯತೆಗಳಿವೆ. ಹೀಗಾಗಿ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಸಿಟಿ ರವಿ ಅವರನ್ನು ಬಂಧಿಸಿ ನಂದಗಡ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಲಾಗಿದೆ.

ಬೆಳಗಾವಿಯ ಹಿರೇಬಾಗೇವಾಡಿ ಠಾಣೆಯಲ್ಲಿ ಬಿಎನ್‌ಎಸ್ ಕಾಯ್ದೆ 75 ಮತ್ತು 79ಅಡಿಯಲ್ಲಿ ಕೇಸ್ ದಾಖಲಾಗಿದ್ದು. ಲೈಂಗಿಕ ಕಿರುಕುಳ, ಮಹಿಳೆ ಇಚ್ಛೆ ವಿರುದ್ಧ ಅಶ್ಲೀಲತೆ ತೋರುವುದು. ಮಹಿಳೆಯ ನಮ್ರತೆ ಅವಮಾನಿಸುವ ಉದ್ದೇಶದಿಂದ ಸನ್ನೆ, ಪದ ಅಥವಾ ಕ್ರಿಯೆ, ಲೈಂಗಿಕ ಬಣ್ಣದ ಟೀಕೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖವಾಗಿದೆ. 

ರಾಜ್ಯಸಭೆಯಲ್ಲಿ ಅಮಿತ್ ಶಾ ಹೇಳಿಕೆ ಖಂಡಿಸಿ ಪರಿಷತ್‌ನಲ್ಲಿ ಇಂದು ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದರು. ಈ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್ ಸದಸ್ಯರ ಮಧ್ಯೆ ಮಾತಿನ ಚಕಮಕಿ ನಡೆಯಿತು. ಮಾತಿನ ಚಕಮಕಿ ನಡೆಯವಾಗ ನನ್ನ ವಿರುದ್ಧ ಸಿಟಿ ರವಿ ಅಸಂವಿಧಾನಿಕ ಪದವನ್ನು ಬಳಸಿದ್ದಾರೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಗಂಭೀರ ಆರೋಪ ಮಾಡಿದ್ದಾರೆ.

 

Leave a Reply

Your email address will not be published. Required fields are marked *