

ಬೆಂಗಳೂರು, ಆ. 26: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಮುಂದಿಟ್ಟುಕೊಂಡು ಸಚಿವ ನಾಗೇಂದ್ರ ರಾಜೀನಾಮೆಗೆ ವಿಪಕ್ಷಗಳು ಪಟ್ಟುಹಿಡಿದಿದ್ದು,ಇದರ ಪರಿಣಾಮ ವಿಧಾನಸಭೆ ಮುಂಗಾರು ಅಧಿವೇಶನವೇ ಪೂರ್ಣಗೊಳ್ಳದೆ ಮೊಟಕುಗೊಂಡಿದೆ.
ಆದರೆ ನಾಗೇಂದ್ರ ರಾಜೀನಾಮೆ ವಿಚಾರದಲ್ಲಿ ಮತ್ತೆ ಹೋರಾಟ ಮುಂದುವರಿಸಲು ಬಿಜೆಪಿ ಹಾಗೂ ಜೆಡಿಎಸ್ ಮುಂದಾಗಿವೆ. ಈ ಬೆಳವಣಿಗೆಗಳ ಬೆನ್ನಲ್ಲೇ ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ ಎಂಬುದು ತಿಳಿದುಬಂದಿದೆ.
ಈ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಜತೆ ದೂರವಾಣಿ ಮೂಲಕ ಮಾತನಾಡಿದ್ದು, ತಮ್ಮನ್ನು ಅನಗತ್ಯವಾಗಿ ಟಾರ್ಗೆಟ್ ಮಾಡಲಾಗುತ್ತಿದೆ. ಇದರಿಂದ ಪಕ್ಷಕ್ಕೆ ಮುಜುಗರವಾಗುವುದು ಬೇಡ ಎಂದಿರುವುದಾಗಿ ತಿಳಿದುಬಂದಿದೆ. ಈ ಬಗ್ಗೆ ಹೈಕಮಾಂಡ್ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಸಿಎಂ ಪ್ರತಿಕ್ರಿಯಿಸಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ.





.
.
.
.
.
.
.
.
.
.
.
.
.
.
.
.
.
.
.
.
