
ಹಾಸನ, ಡಿ.01: ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ಜೋರಾಗುತ್ತಿರುವ ಬೆನ್ನಲ್ಲೇ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಸೋಮವಾರ ಬೆಳಗ್ಗೆ ಕೋಡಿ ಮಠದ ಶ್ರೀಗಳನ್ನು ರಹಸ್ಯವಾಗಿ ಭೇಟಿಯಾಗಿದ್ದು, ಇದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಹಾರನಹಳ್ಳಿಯ ಕೋಡಿ ಮಠದಲ್ಲಿ ಇಂದು ಸಚಿವ ಪರಮೇಶ್ವರ್ ಅವರು ಕೋಡಿ ಮಠದ ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದು ಬಳಿಕ 1 ಗಂಟೆಗೂ ಅಧಿಕ ಕಾಲ ಚರ್ಚೆ ನಡೆಸಿದ್ದಾರೆ. ಸಧ್ಯಕ್ಕೆ ರಾಜ್ಯ ರಾಜಕಾರಣದಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಸಿಎಂ ಸ್ಥಾನದ ಶೀತಲ ಸಮರ ನಡೆಯುತ್ತಿರುವ ಬೆನ್ನಲ್ಲೇ ದಲಿತ ಸಿಎಂ ಕೂಗು ಕೂಡ ಕೇಳಿಬಂದಿದ್ದು, ಪರಮೇಶ್ವರ್ ಅವರ ಈ ಭೇಟಿ ತೀವ್ರ ಕುತೂಹಲ ಮೂಡಿಸಿದೆ.

.
.
