ಕಾರ್ಕಳ: ದಲಿತ ಸಮುದಾಯದ ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಪಂಚಾಯತ್ ಸದಸ್ಯನೇ ಅತ್ಯಾಚಾರವೆಸಗಿ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣ ನಡೆದಿದೆ.
ಕಾರ್ಕಳ ತಾಲೂಕಿನ ಕಲ್ಯಾ ಗ್ರಾಮ ಪಂಚಾಯತಿ ಸದಸ್ಯ ಸಂತೋಷ್ ಪುತ್ರನ್ (46ವ) ಎಂಬಾತನೇ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಲೈಂಗಿಕ ದೌರ್ಜನ್ಯ ನಡೆಸಿ ಬೆದರಿಕೆ ಹಾಕಿದ ಆರೋಪದಲ್ಲಿ ಆತನ ವಿರುದ್ಧ ಪೋಕ್ಸೋ ಹಾಗೂ ದಲಿತ ದೌರ್ಜನ್ಯ ಕಾಯಿದೆಯಡಿ ಪ್ರಕರಣ ದಾಖಲಾಗಿದೆ.
ವಿವಾಹಿತನಾಗಿರುವ ಆರೋಪಿ ಕಾಮುಕ ಕ್ರಿಮಿ ಸಂತೋಷ್ ಪುತ್ರನ್ ಬಾಲಕಿಯನ್ನು ಬೆದರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದು, ಈತನ ವಿರುದ್ಧ ಪೋಷಕರು ಕಾರ್ಕಳ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದು ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿ ಸಂತೋಷ್ ಪುತ್ರನ್ ಎಂಬಾತನನ್ನು ಬಂಧಿಸಿ ವಿಚಾರಣೆ ನಡೆಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಇದಲ್ಲದೇ ಆರೋಪಿ ಸಂತೋಷ್ ಪುತ್ರನ್ ಕಳೆದ ಹಲವು ತಿಂಗಳ ಹಿಂದೆ ಕಲ್ಯಾ ಪಂಚಾಯತ್ ಕರ ವಸೂಲಿಗಾರನಿಗೆ ವಿನಾಕಾರಣ ಪದೇಪದೇ ಮಾನಸಿಕ ಕಿರುಕುಳ ನೀಡುತ್ತಿದ್ದ ಹಾಗೂ ರಾಜೀನಾಮೆ ನೀಡುವಂತೆ ಬೆದರಿಕೆ ಹಾಕಿದ್ದ ಪ್ರಕರಣ ನಡೆದಿತ್ತು. ಬಳಿಕ ಈ ವಿವಾದ ತಣ್ಣಗಾಗಿತ್ತು.
ಸಮಾಜಕ್ಕೆ ಮಾದರಿಯಾಗಿರಬೇಕಿದ್ದ ಜನರಿಂದ ಚುನಾಯಿತನಾಗಿ ಪಂಚಾಯತ್ ಸದಸ್ಯನಾಗಿ ಆಯ್ಕೆಯಾದ ಸಂತೋಷ್ ಪುತ್ರನ್ ಎಂಬ ಕಾಮುಕ ಕ್ರಿಮಿಯ ಸದಸ್ಯತ್ವವನ್ನು ತಕ್ಷಣವೇ ರದ್ದುಪಡಿಸಿ ಈತನಿಗೆ ಕಠಿಣ ಶಿಕ್ಷೆ ನೀಡುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಕಾರ್ಕಳ ಡಿವೈಎಸ್ಪಿ ಅರವಿಂದ ಕಲಗುಜ್ಜಿ ನೇತೃತ್ವದಲ್ಲಿ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.