Share this news

ಬೆಂಗಳೂರು: ಎಡನೀರು ಸಂಸ್ಥಾನದ ಸಚ್ಚಿದಾನಂದ ಭಾರತೀ ಶ್ರೀಗಳ ಕಾರಿನ ಮೇಲೆ ಕೇರಳದಲ್ಲಿ ಮತಾಂಧ ಶಕ್ತಿಗಳು ದಾಳಿ ನಡೆಸಿರುವುದು ಅತ್ಯಂತ ಖಂಡನೀಯ ಎಂದು ಕಾರ್ಕಳ ಶಾಸಕರಾದ ವಿ ಸುನಿಲ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಸಾರ್ವಜನಿಕ ಕಾರ್ಯಕ್ರಮದಿಂದ ಹಿಂದಿರುಗುವಾಗ ಬೋವಿಕಾನ – ಇರಿಯಣ್ಣಿ ಮಾರ್ಗ ಮಧ್ಯೆ ವಾಹನವನ್ನು ತಡೆದ ಪುಂಡರ ತಂಡವೊಂದು ತಗಾದೆ ಎಬ್ಬಿಸಿತ್ತು. ಇದೇ ದಾರಿಯಲ್ಲಿ ಕಾರ್ಯಕ್ರಮ ಮುಗಿಸಿ ಮರಳಿ ಬರುವಾಗ ಇರಿಯಣ್ಣಿಯಿಂದಲೇ ಹಿಂಬಾಲಿಸಿ ಬಂದ ದುಷ್ಕರ್ಮಿಗಳು ಬಾವಿಕೆರೆ ಎಂಬಲ್ಲಿ ದೊಣ್ಣೆಯಿಂದ ಕಾರಿಗೆ ಹಾನಿ ಮಾಡಿದ್ದಾರೆ. ಸಚ್ಚಿದಾನಂದ ಭಾರತೀ ಶ್ರೀಗಳ ವಾಹನದ ಮೇಲೆ ದಾಳಿ ಮಾಡಿದ ದುಷ್ಕರ್ಮಿಗಳನ್ನು ತಕ್ಷಣವೇ ಬಂಧಿಸಿ, ಕೇರಳ ಸರ್ಕಾರವು ಶ್ರೀಗಳಿಗೆ ಸೂಕ್ತ ಭದ್ರತಾ ವ್ಯವಸ್ಥೆ ಒದಗಿಸಬೇಕು ಎಂದು ಶಾಸಕ ಹಾಗೂ ಮಾಜಿ ಸಚಿವ ಸುನಿಲ್ ಕುಮಾರ್ ಆಗ್ರಹಿಸಿದ್ದಾರೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *