ಕಾರ್ಕಳ: ರಸ್ತೆ ಬದಿಯಲ್ಲಿ ನಿಂತಿದ್ದ ವ್ಯಕ್ತಿಯೊಬ್ಬರಿಗೆ ಬೈಕ್ ಡಿಕ್ಕಿಯಾಗಿ ತಲೆಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ವಜ್ರಕುಮಾರ್ ಗಾಯಗೊಂಡ ವ್ಯಕ್ತಿ.
ಆ.13 ರಂದು ಮಿಯ್ಯಾರು ಗ್ರಾಮದ ಜೋಡುಕಟ್ಟೆ ಎಂಬಲ್ಲಿ ಬಜಗೋಳಿ ಕಡೆಯಿಂದ ಕಾರ್ಕಳ ಕಡೆಗೆ ಬರುತ್ತಿದ್ದ ಬೈಕ್ ಅತೀವೇಗ ಹಾಗೂ ಅಜಾಗರೂಕತೆಯಿಂದ ರಸ್ತೆ ಬದಿಯಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ವಜ್ರಕುಮಾರ್ ಎಂಬವರಿಗೆ ಡಿಕ್ಕಿಯಾಗಿದೆ.
ಅಪಘಾತದ ಪರಿಣಾಮ ವಜ್ರಕುಮಾರ್ ರಸ್ತೆಗೆ ಬಿದ್ದು ತಲೆಗೆ ಗಂಭೀರ ಗಾಯವಾಗಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದವರಿಗೆ ಕಾರ್ಕಳ ನಿಟ್ಟೆ ಗಾಜ್ರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ದೇರಳಕಟ್ಟೆ ಕೆ ಎಸ್ ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.