






ಕಾರ್ಕಳ: ಬೈಕಿಗೆ ರಿಕ್ಷಾ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮುಡಾರಿನ ಸ್ವಸ್ತಿಕ್ (22) ಜುಲೈ 14 ರಂದು ಬೈಕಿನಲ್ಲಿ ಬಜಗೋಳಿ ಕಡೆಯಿಂದ ಕಾರ್ಕಳ ಕಡೆಗೆ ಹೋಗುತ್ತಿದ್ದಾಗ ಮಿಯ್ಯಾರು ಗ್ರಾಮದ ಕುಂಟಿಬೈಲ್ ಜಂಕ್ಷನ್ ಬಳಿ ಬಜಗೋಳಿ ಕಡೆಯಿಂದ ಕಾರ್ಕಳ ಕಡೆಗೆ ಹೋಗುತ್ತಿದ್ದ ರಿಕ್ಷಾ ಯಾವುದೇ ಸೂಚನೆಯನ್ನು ನೀಡದೇ ಬಲಕ್ಕೆ ತಿರುಗಿಸಿದ ಪರಿಣಾಮ ಬೈಕಿಗೆ ಢಿಕ್ಕಿಯಾಗಿದೆ.
ಅಪಘಾತದ ಪರಿಣಾಮ ಬೈಕ್ ಸವಾರ ರಸ್ತೆಗೆ ಬಿದ್ದು ಗಾಯಗೊಂಡಿದ್ದು ಕಾರ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .


