ಕಾರ್ಕಳ : ಒಂದು ಕಳೆದ ತಿಂಗಳ ಹಿಂದೆ ಪತಿ ತೀರಿಕೊಂಡ ಬಳಿಕ ಮಾಸಿಕವಾಗಿ ಕೊರಗುತ್ತಿದ್ದ ಪತ್ನಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಮಿಯ್ಯಾರು ಕುಂಟಿಬೈಲ್ ಮಂಜಡ್ಕ ಎಂಬಲ್ಲಿ ನಡೆದಿದೆ. ಮಿಯ್ಯಾರಿನ ಸೌಮ್ಯ(39ವ) ಆತ್ಮಹತ್ಯೆ ಮಾಡಿಕೊಂಡವರು.
ಕಳೆದ 15 ವರ್ಷಗಳಿಂದ ಮಿಯ್ಯಾರು ಚಚ್ ಬಳಿಯ ಅಂಗನವಾಡಿ ಕಾರ್ಯಕರ್ತೆ ಆಗಿ ಕೆಲಸ ಮಾಡುತ್ತಿದ್ದ ಸೌಮ್ಯ ಅವರ ಪತಿ ತಿಂಗಳ ಹಿಂದೆ ಮೃತಪಟ್ಟಿದ್ದರು. ಪತಿಯನ್ನು ಕಳೆದುಕೊಂಡ ಕೊರಗಿನಿಂದ ಮಾನಸಿಕವಾಗಿ ನೊಂದಿದ್ದ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು ತಂದೆಯ ಬಳಿಕ ತಾಯಿಯನ್ನೂ ಕಳೆದುಕೊಂಡ ಮಕ್ಕಳು ಮಾತ್ರ ಅನಾಥರಾಗಿದ್ದಾರೆ.