
ಕಾರ್ಕಳ, ಡಿ.25: ಬೈಕಿಗೆ ಜೀಪ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮಿಯ್ಯಾರು ಗ್ರಾಮದ ಜೋಡುಕಟ್ಟೆ ಬಳಿ ಡಿ.23 ರಂದು ನಡೆದಿದೆ.
ಚಂದ್ರಪ್ಪ ಅವರು ಬೈಕಿನಲ್ಲಿ ಬಜಗೋಳಿಯಿಂದ ಕಾರ್ಕಳ ಕಡೆಗೆ ಬರುತ್ತಿದ್ದಾಗ ಜೋಡುಕಟ್ಟೆ ಬಳಿ ಹಿಂದಿನಿಂದ ವೇಗವಾಗಿ ಬಂದ ಜೀಪ್ ಡಿಕ್ಕಿಯಾಗಿದೆ. ಅಪಘಾತದ ಪರಿಣಾಮ ಚಂದ್ರಪ್ಪ ಅವರು ಬಿದ್ದು ಗಾಯಗೊಂಡಿದ್ದು ಅವರನ್ನು ಚಿಕಿತ್ಸೆಗೆ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


.
.
