Share this news

ಕಾರ್ಕಳ:ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಜೀವನದಲ್ಲಿ ಜಿಗುಪ್ಸೆಗೊಂಡು ನೇಣಿಗೆ ಶರಣಾಗಿದ್ದಾರೆ.

ಮಿಯ್ಯಾರು ಗ್ರಾಮದ ಗುಲಾಬಿ (63)ಎಂಬವರು ಆತ್ಮಹತ್ಯೆ ಮಾಡಿಕೊಂಡವರು.
ಅವರು ಕಳೆದ 1 ವರ್ಷದಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಈ ಕುರಿತು ಉಡುಪಿಯ ಬಾಳಿಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೇ ನೋವಿನಿಂದ ಮಾನಸಿಕ ಖಿನ್ನತೆಯಿಂದ ಶನಿವಾರ ತಡರಾತ್ರಿ ಮಿಯ್ಯಾರು ಗ್ರಾಮದ ಕುಂಟಿಬೈಲು ಪೊಸರುಗುಟ್ಟೆ ಎಂಬಲ್ಲಿನ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

                        

                          

                        

                          

 

`

Leave a Reply

Your email address will not be published. Required fields are marked *