
ಕಾರ್ಕಳ, ಜ.05: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ (ರಿ )ಕಾರ್ಕಳ ತಾಲೂಕು. ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ,ಕಾರ್ಕಳ ಇದರ ವತಿಯಿಂದ ಮಿಯ್ಯಾರು ಮೊರಾರ್ಜಿ ದೇಸಾಯಿ ವಸತಿ ಪ್ರೌಢ ಶಾಲೆಯಲ್ಲಿ ಮಕ್ಕಳಿಗೆ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮವನ್ನು ನಡೆಯಿತು.
ಜನಜಾಗೃತಿ ವೇದಿಕೆ ವಲಯಾಧ್ಯಕ್ಷ ಜಯರಾಮ ಬಂಗೇರ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಮುಖ್ಯ ಅತಿಥಿಯಾಗಿ ವಲಯಾಧ್ಯಕ್ಷ ರಾದ ಅಶ್ವಥ್ ನಾರಾಯಣ್ ಮಾತನಾಡಿ ಮಕ್ಕಳಿಗೆ ಈ ಕಾರ್ಯಕ್ರಮದ ಮಹತ್ವ ತಿಳಿಸಿ ಮಕ್ಕಳು ಉತ್ತಮ ರೀತಿಯಲ್ಲಿ ಬೆಳೆಯುವಂತೆ ಪ್ರೆರೇಪಿಸಿದರು.ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಮಾಧವ್ ನಾಯಕ್ ದುಶ್ಚಟಕ್ಕೆ ಬಲಿಯಾದರೆ ಮುಂದೆ ಆಗುವ ಅನಾಹುತದ ಬಗ್ಗೆ ತಿಳಿಸಿ ಯಾವುದೇ ತಪ್ಪು ದಾರಿಯಲ್ಲಿ ನಡೆಯದಂತೆ ಮಾಹಿತಿ ನೀಡಿದರು ಹಾಗೂ ಮಕ್ಕಳು ಸಂಸ್ಕಾರವಂತರಾಗಿ ಬೆಳೆದು ಭಾರತ ಮಾತೆಯ ಹೆಮ್ಮೆಯ ಮಕ್ಕಳಾಗಬೇಕು ಎಂದರು.
ಶಿಕ್ಷಕಿ ವನಶ್ರೀ ಇವರು ಕಾರ್ಯಕ್ರಮದ ಬಗ್ಗೆ ಉತ್ತಮ ಅಭಿಪ್ರಾಯ ವ್ಯಕ್ತ ಪಡಿಸಿದರು.ಮುಖ್ಯ ಶಿಕ್ಷಕಿ ವೇದಾ ಸೀತಾರಾಮ್ ನಾಯಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಸೇವಾಪ್ರತಿನಿಧಿ ಸುರೇಖಾ ಸ್ವಾಗತಿಸಿ,ಶಿಕ್ಷಕರಾದ ಮೋಹನ್ ಇವರು ವಂದಿಸಿದರು.ಕಾರ್ಯಕ್ರಮವನ್ನು ಮೇಲ್ವಿಚಾರಕ ದಿನೇಶ್ ಹೆಗ್ಡೆ ನಿರೂಪಿಸಿದರು. ಶಿಕ್ಷಕಿ ಗೀತಾ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

.
.
