ಕಾರ್ಕಳ: ಬೈಕಿನಲ್ಲಿ ಹೋಗುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದ ಹಿಂಬದಿ ಸವಾರೆ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಾರ್ಕಳ ತಾಲೂಕಿನ ಮಿಯ್ಯಾರಿನಲ್ಲಿ ಗುರುವಾರ(ಡಿ5) ನಡೆದಿದೆ.
ಸುನಂದ ಎಂಬವರು ಬೈಕಿನಲ್ಲಿ ಹಿಂಬದಿ ಸವಾರೆಯಾಗಿ ಕುಳಿತು ಹೋಗುತ್ತಿದ್ದಾಗ ಮಿಯ್ಯಾರ್ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ಗಣಪತಿಕಟ್ಟೆ ಅಣ್ಣಾಲಗುಡ್ಡೆ ಎಂಬಲ್ಲಿ ಬೈಕಿಗೆ ಏಕಾಏಕಿ ದನ ಅಡ್ಡ ಬಂದಾಗ ಒಮ್ಮೆಲೇ ಬ್ರೇಕ್ ಹಾಕಿದ ಪರಿಣಾಮ ಹಿಂಬದಿ ಕುಳಿತಿದ್ದ ಸುನಂದ ಅವರು ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕೂಡಲೇ ಅವರಿಗೆ ಕಾರ್ಕಳ ಗಾಜ್ರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.