
ನವದೆಹಲಿ: ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಓಬಳಾಪುರಂ ಮೈನಿಂಗ್ ಕಂಪನಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಗಂಗಾವತಿ ಕ್ಷೇತ್ರದ ಶಾಸಕ ಗಾಲಿ ಜನಾರ್ದನ ರೆಡ್ಡಿ ಅಪರಾಧಿ ಎಂದು ಸಿಬಿಐ ಕೋರ್ಟ್ ಮಂಗಳವಾರ ತೀರ್ಪು ಪ್ರಕಟಿಸಿದೆ.ಇದರ ಜತೆಗೆ ಓಬಳಾಪುರಂ ಮೈನಿಂಗ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕನಾಗಿದ್ದ ಬಿ.ವಿ.ಶ್ರೀನಿವಾಸರೆಡ್ಡಿ ಕೂಡ ಅಪರಾಧಿಎಂದು ಕೋರ್ಟ್ ತೀರ್ಪು ನೀಡಿದೆ.
2009ರಲ್ಲಿ ಅಂದಿನ ಆಂಧ್ರಪ್ರದೇಶ ಸರ್ಕಾರದ ಕೋರಿಕೆಯ ಮೇರೆಗೆ ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ ಸಿಬಿಐ ತನಿಖೆಯನ್ನು ಪ್ರಾರಂಭಿಸಿತು.ಸಿಬಿಐ 2011ರಲ್ಲಿ ಮೊದಲ ಆರೋಪಪಟ್ಟಿ ಸಲ್ಲಿಸಿತ್ತು, ನಂತರ ಐಎಎಸ್ ಅಧಿಕಾರಿ ಶ್ರೀಲಕ್ಷ್ಮಿ, ಗಾಲಿ ಜನಾರ್ದನ ರೆಡ್ಡಿ ಅವರ ಆಪ್ತ ಸಹಾಯಕ ಮೆಫಾಜ್ ಅಲಿ ಖಾನ್ ಮತ್ತು ಮಾಜಿ ಸಚಿವೆ ಸಬಿತಾ ಇಂದ್ರ ರೆಡ್ಡಿ ಸೇರಿದಂತೆ ಒಂಬತ್ತು ಆರೋಪಿಗಳ ವಿರುದ್ಧ ಪೂರಕ ಆರೋಪಪಟ್ಟಿ ಸಲ್ಲಿಸಿತ್ತು.
ಈ ಪ್ರಕರಣದಲ್ಲಿ ಬಿ.ವಿ.ಶ್ರೀನಿವಾಸ ರೆಡ್ಡಿ, ಗಾಲಿ ಜನಾರ್ದನ ರೆಡ್ಡಿ, ಓಬಳಾಪುರಂ ಮೈನಿಂಗ್ ಕಂಪನಿ ಮೆಫಾಜ್ ಅಲಿ ಖಾನ್, ಮಾಜಿ ಗಣಿ ನಿರ್ದೇಶಕ ವಿ.ಡಿ.ರಾಜಗೋಪಾಲ್, ಮಾಜಿ ಐಎಎಸ್ ಅಧಿಕಾರಿ ಕೃಪಾನಂದA ಮತ್ತು ಮಾಜಿ ಸಚಿವೆ ಸಬಿತಾ ಇಂದ್ರ ರೆಡ್ಡಿ ಆರೋಪಿಗಳಾಗಿದ್ದರು
ಭಾರತೀಯ ದಂಡ ಸಂಹಿತೆ (ಐಪಿಸಿ) ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯ ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ಆರೋಪಗಳನ್ನು ರೂಪಿಸಲಾಗಿತ್ತು. ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ನಡೆದ ವಿಚಾರಣೆಯು ಕಳೆದ ತಿಂಗಳು ನ್ಯಾಯಾಲಯವು ಪೂರ್ಣಗೊಳಿಸಲು ಮೇ ಗಡುವನ್ನು ನಿಗದಿಪಡಿಸಿದ ನಂತರ ವಾದಗಳನ್ನು ಮುಕ್ತಾಯಗೊಳಿಸಿತು.
ಜನಾರ್ದನ ರೆಡ್ಡಿಗೆ ಜೈಲು ಖಚಿತ?
ಶಾಸಕ ಜನಾರ್ದನ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ ಪ್ರಕಟವಾಗಿದ್ದು, ಈ ತೀರ್ಪಿಗೆ ತಡೆಯಾಜ್ಞೆ ತರದಿದ್ದರೆ ಅವರ ಶಾಸಕ ಸ್ಥಾನಕ್ಕೂ ಕುತ್ತು ಬರುವ ಸಾಧ್ಯತೆಯಿದೆ. ಈಗಾಗಲೇ ರೆಡ್ಡಿ ಜಾಮೀನಿಗಾಗಿ ಹೈದರಾಬಾದ್À ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲು ನಿರ್ಧರಿಸಿದ್ದು ಹೈಕೋರ್ಟ್ ಜಾಮೀನು ನೀಡುವವರೆಗೆ ಜೈಲಿನಲ್ಲಿರಬೇಕಾಗುತ್ತದೆ.




