ತೆಲಂಗಾಣ: ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ನಡೆದ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಮತ್ತು ಅವರ ಸಂಬಂಧಿ ಓಬಳಾಪುರಂ ಮೈನಿಂಗ್ ಕಾರ್ಪೊರೇಷನ್ (ಒಎಂಸಿ) ವ್ಯವಸ್ಥಾಪಕ ನಿರ್ದೇಶಕ ಬಿ.ವಿ. ಶ್ರೀನಿವಾಸ್ ರೆಡ್ಡಿ ಸೇರಿದಂತೆ ನಾಲ್ವರಿಗೆ ಹೈದರಾಬಾದ್‌ನಲ್ಲಿರುವ ಕೇಂದ್ರೀಯ ತನಿಖಾ ದಳ (ಸಿಬಿಐ) ವಿಶೇಷ ನ್ಯಾಯಾಲಯ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು.ಸಿಬಿಐ ಕೋರ್ಟ್ ವಿಧಿಸಿದ ಶಿಕ್ಷೆಯನ್ನು ತೆಲಂಗಾಣ ಹೈಕೋರ್ಟ್ ಇದೀಗ ರದ್ದುಗೊಳಿಸಿದೆ. ಈ ಮೂಲಕ ಹಲವು ಷರತ್ತು ವಿಧಿಸಿ ಜನಾರ್ದನ ರೆಡ್ಡಿಗೆ ಜಾಮೀನು ಮಂಜೂರು ಮಾಡಿದೆ.
ಓಬಳಾಪುರಂ ಮೈನಿಂಗ್ ಕಂಪನಿ (OMC) ಪ್ರಕರಣದಲ್ಲಿ ಶಿಕ್ಷೆಗೊಳಗಾದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಮತ್ತು ಇತರರು ಸಲ್ಲಿಸಿರುವ ಅರ್ಜಿಗಳ ಕುರಿತು ತೆಲಂಗಾಣ ಹೈಕೋರ್ಟ್ ಇಂದು ತೀರ್ಪು ಪ್ರಕಟಿಸಿದ್ದು, ಆರೋಪಿಗಳಾದ ಗಾಲಿ ಜನಾರ್ದನ ರೆಡ್ಡಿ, ಬಿ.ವಿ. ಶ್ರೀನಿವಾಸ ರೆಡ್ಡಿ, ವಿ.ಡಿ. ರಾಜಗೋಪಾಲ್ ಮತ್ತು ಅಲಿ ಖಾನ್ ಸಲ್ಲಿಸಿರುವ ಜಾಮೀನು ಅರ್ಜಿಗಳ ಜೊತೆಗೆ ಗಾಲಿ ಜನಾರ್ದನ ರೆಡ್ಡಿ ಪ್ರತ್ಯೇಕವಾಗಿ ಸಲ್ಲಿಸಿರುವ ಜೈಲು ಶಿಕ್ಷೆಯ ಅರ್ಜಿಗಳ ಮೇಲಿನ ಶಿಕ್ಷೆಯನ್ನು ರದ್ದುಗೊಳಿಸಿ ಹೈಕೋರ್ಟ್ ತೀರ್ಪು ನೀಡಿದೆ.
ಜಾಮೀನಿಗೆ ಯಾವುದೇ ಆಕ್ಷೇಪಣೆ ವ್ಯಕ್ತಪಡಿಸದ ಸಿಬಿಐ, ಜೈಲು ಶಿಕ್ಷೆಯನ್ನು ಅಮಾನತುಗೊಳಿಸುವುದನ್ನು ವಿರೋಧಿಸಿತು. ಇದೀಗ ತೆಲಂಗಾಣ ಹೈಕೋರ್ಟ್ ನ್ಯಾಯಮೂರ್ತಿ ಕೆ. ಲಕ್ಷ್ಮಣ್ ಅವರ ಪೀಠವು ಜನಾರ್ದನ ರೆಡ್ಡಿಗೆ ಹಲವು ಶರತ್ತು ವಿಧಿಸಿ ಜಾಮೀನು ಮಂಜೂರು ಮಾಡಲಾಗಿದೆ 10 ಲಕ್ಷ ರೂಪಾಯಿ ಎರಡು ಚಿರೋಟಿ ಹಾಗೂ ಪಾಸ್ಪೋರ್ಟ್ ವಶಕ್ಕೆ ನೀಡಲು ಸೂಚನೆ ನೀಡಿದೆ. ಅಲ್ಲದೆ ದೇಶ ಬಿಟ್ಟು ಹೋಗದಂತೆ ಜನಾರ್ಧನ ರೆಡ್ಡಿಗೆ ಹೈಕೋರ್ಟ್ ಸೂಚನೆ ನೀಡಿದೆ.