ಬೆಂಗಳೂರು:ಯಾದಗಿರಿ ಜಿಲ್ಲೆಯ ಸುರಪುರ ಕ್ಷೇತ್ರದ ಕಾಂಗ್ರೆಸ್,ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ತೀವ್ರ ಹೃದಯಾಘಾತದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಭಾನುವಾರ ಮುಂಜಾನೆ ಹೃದಯಾಘಾತವಾದ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಿಸದೇ ರಾಜಾ ವೆಂಕಟಪ್ಪ ನಾಯಕ ವಿಧಿವಶರಾಗಿದ್ದಾರೆ. ಶಾಸಕ ರಾಜಾ ವೆಂಕಟಪ್ಪ ನಾಯಕ(67) ಸುರಪುರ ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿದ್ದರು. ಅವರಿಗೆ ರಾಜ್ಯ ಸರ್ಕಾರದಿಂದ ಎರಡು ವಾರಗಳ ಹಿಂದಷ್ಟೇ ನಿಗಮ-ಮಂಡಳಿ ನೇಮಕಾತಿ ಆದೇಶ ಮಾಡಲಾಗಿತ್ತು. ಅವರು ಉಗ್ರಾಣ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು.
ಗಣ್ಯರ ಸಂತಾಪ: ಶಾಸಕ ರಾಜಾ ವೆಂಕಟಪ್ಪ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಸ್ಪೀಕರ್ ಯು.ಟಿ ಖಾದರ್, ಡಿಸಿಎಂ ಡಿಕೆ ಶಿವಕುಮಾರ್, ವಿಪಕ್ಷ ನಾಯಕ ಆರ್.ಅಶೋಕ್ ಸೇರಿದಂತೆ ಹಲವಾರು ಗಣ್ಯರು ಸಂತಾಪ ಸೂಚಿಸಿದ್ದಾರೆ