ಕಾರ್ಕಳ: ಲೋಕಸಭಾ ಚುನಾವಣೆ ಅತ್ಯಂತ ಬಿರುಸಿನಿಂದ ನಡೆಯುತ್ತಿದ್ದು ಇಂದು ಬೆಳಗ್ಗೆ 89 ಗಂಟೆಗೆ ಕಾರ್ಕಳ ಶಾಸಕ ಸುನಿಲ್ ಕುಮಾರ್ ತನ್ನ ಪತ್ನಿ ಪ್ರಿಯಾಂಕಾ ಅವರೊಂದಿಗೆ ಮತಗಟ್ಟೆಗೆ ತೆರಳಿ ತಮ್ಮ ಹಕ್ಕು ಚಲಾಯಿಸಿದರು.
ಮತ ಚಲಾಯಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ಈ ಚುನಾವಣೆ ಪ್ರಜಾಪ್ರಭುತ್ವದ ಹಬ್ಬವಾಗಿದೆ. ಈ ಮತದಾನದಲ್ಲಿ ಪಾಲ್ಗೊಂಡ ಸಂತೋಷವಿದೆ. ವಿಕಸಿತ ಹಾಗೂ ಸದೃಢ ಭಾರತಕ್ಕಾಗಿ ದೇಶದ ಜನರು ನರೇಂದ್ರ ಮೋದಿಯವರನ್ನು ಬೆಂಬಲಿಸಿದ್ದಾರೆ ಆ ಮೂಲಕ ಕೋಟ ಶ್ರೀನಿವಾಸ ಪೂಜಾರಿಯವರು ಅತ್ಯಧಿಕ ಮತಗಳಿಂದ ಗೆದ್ದು ಕೇಂದ್ರದಲ್ಲಿ ಮತ್ತೊಮ್ಮೆ ಮೋದಿ ನೇತೃತ್ವದ ಸರ್ಕಾರಕ್ಕೆ ಜನಾಶೀರ್ವಾದ ಮಾಡಲಿದ್ದಾರೆ ಎನ್ನುವ ವಿಶ್ವಾಸ ನನಗಿದೆ ಎಂದರು.