Share this news

ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರದ ಕಾರ್ಕಳ ಹಾಗೂ ಹೆಬ್ರಿ ತಾಲೂಕು ವ್ಯಾಪ್ತಿಯಲ್ಲಿ ಆ.18 ರಂದು ಅತಿಯಾದ ಮಳೆ ಹಾಗೂ ಸುಂಟರ ಗಾಳಿಯಿಂದಾಗಿ ಸುಮಾರು ನೂರಕ್ಕೂ ಹೆಚ್ಚಿನ ವಾಸದ ಮನೆಗಳಿಗೆ ಹಾನಿಯಾಗಿದ್ದು, ಬೆಳೆ ಹಾನಿ ಸೇರಿದಂತೆ ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ಅಪಾರ ಹಾನಿ ಉಂಟಾಗಿರುತ್ತದೆ.

ಕಾರ್ಕಳ ತಾಲೂಕಿನ ಬೆಳ್ಮಣ್‌, ಸೂಡ, ನಂದಳಿಕೆ, ರೆಂಜಾಳ, ಬೈಲೂರು, ಕಡ್ತಲ ಹಾಗೂ ಯರ್ಲಪಾಡಿ ಗ್ರಾಮಗಳ ಪರಿಸರದಲ್ಲಿ ಮತ್ತು ಹೆಬ್ರಿ ತಾಲೂಕಿನ ಚಾರ, ಕುಚ್ಚೂರು ಮತ್ತು ಮುದ್ರಾಡಿ ಗ್ರಾಮಗಳ ಪರಿಸರದಲ್ಲಿ ನಿನ್ನೆ ಸಂಜೆಯ ವೇಳೆಗೆ ಬೀಸಿದ ಸುಂಟರಗಾಳಿ ಹಾಗೂ ಅತಿಯಾದ ಮಳೆ ಗಾಳಿಯಿಂದ ಆ ಪ್ರದೇಶದ ಹಲವು ಕಡೆಗಳಲ್ಲಿ ವಾಸದ ಮನೆಗಳು, ಕೃಷಿ ಸೇರಿದಂತೆ ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ಹಾನಿ ಉಂಟಾಗಿದ್ದು, ತುರ್ತು ಪರಿಹಾರವನ್ನು ಒದಗಿಸುವುದು ತುಂಬಾ ಅವಶ್ಯಕವಾಗಿದೆ. ಈ ಹಿನ್ನಲೆಯಲ್ಲಿ ಕಾರ್ಕಳ ಶಾಸಕರಾದ ವಿ ಸುನಿಲ್‌ ಕುಮಾರ್‌ ರವರು ವಿಧಾನ ಸಭಾ ಅಧಿವೇಶನ ಸಂದರ್ಭದಲ್ಲಿ ಕಂದಾಯ ಸಚಿವರಾದ  ಕೃಷ್ಣ ಭೈರೇಗೌಡ ಅವರನ್ನು ಭೇಟಿ ಮನವಿ ಸಲ್ಲಿಸಿದ್ದಾರೆ. ಮುಖ್ಯವಾಗಿ ವಾಸದ ಮನೆಗಳಿಗೆ ಆಗಿರುವ ಹಾನಿಗೆ ಸಂಬಂಧಿಸಿದಂತೆ ಸಚಿವರಿಗೆ ಮಾಹಿತಿ ನೀಡಿ, ತುರ್ತು ಅನುದಾನವನ್ನು ಬಿಡುಗಡೆ ಮಾಡುವಂತೆ ಹಾಗೂ ಆದಷ್ಟೂ ಶೀಘ್ರವಾಗಿ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕೆಂದು ಶಾಸಕರು ಮನವಿಯಲ್ಲಿ ಉಲ್ಲೇಖಿಸಿದ್ದಾರೆ.

: ವಿಕಾಸ ಜನಸೇವಾ ಕಛೇರಿ ಕಾರ್ಕಳ

 

 

 

 

 

 

  

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

  

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *