ಕಾರ್ಕಳ ಆ 13: ಕಳೆದ ಬಾರಿಯ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಿಎಂ ಬೊಮ್ಮಾಯಿಯವರು ಕಾರ್ಕಳ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಬಿಡುಗಡೆಗೊಳಿಸಿದ್ದ ಸುಮಾರು 75 ಕೋಟಿ ರೂ ಅನುದಾನವನ್ನು ಹಾಲಿ ಕಾಂಗ್ರೆಸ್ ಸರ್ಕಾರವು ತಡೆ ಹಿಡಿದಿದ್ದು ಇದರಿಂದ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳಿಗೆ ಹಿನ್ನಡೆಯಾಗಿದೆ ಆದ್ದರಿಂದ ಸಿಎಂ ಸಿದ್ಧರಾಮಯ್ಯನವರು ತಕ್ಷಣವೇ ಬಾಕಿ ಉಳಿದ ಅನುದಾನವನ್ನು ಬಿಡುಗಡೆಗೊಳಿಸಬೇಕೆಂದು ಮಾಜಿ ಸಚಿವ ಹಾಗೂ ಶಾಸಕ ಸುನಿಲ್ ಕುಮಾರ್ ಸಿಎಂ ಅವರಿಗೆ ಆಗ್ರಹಿಸಿದ್ದಾರೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಂಜಿನಿಯರಿAಗ್ ಇಲಾಖೆ, ಲೋಕೋಪಯೋಗಿ ಇಲಾಖೆ, ಬೃಹತ್ ನೀರಾವರಿ ಇಲಾಖೆ (ವಾರಾಹಿ), ಪ್ರವಾಸೋದ್ಯಮ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಇಂಧನ ಇಲಾಖೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸೇರಿದಂತೆ ಇತರ ಇಲಾಖೆಗಳಿಂದ ಮಂಜೂರಾತಿಯಾದ ಕಾಮಗಾರಿಗಳ ಪೈಕಿ ಕೆಲವು ಕಾಮಗಾರಿಗಳು ಆಡಳಿತಾತ್ಮಕ ಅನುಮೋದನೆ ಆಗಿದ್ದು, ಕೆಲವು ಕಾಮಗಾರಿಗಳು ಟೆಂಡರ್ ಪ್ರಕ್ರಿಯೆ ಮುಗಿದಿರುತ್ತದೆ, ಕೆಲವು ಟೆಂಡರ್ ಮುಗಿದು ಅಗ್ರಿಮೆಂಟ್ ಹಂತದಲ್ಲಿದ್ದವು. ಆದರೆ 2023ರಲ್ಲಿಅಧಿಕಾರಕ್ಕೆ ಬಂದ ಸಿದ್ದರಾಮಯ್ಯನೇತೃತ್ವದ ಕಾಂಗ್ರೆಸ್ ಸರ್ಕಾರವು ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಂಜೂರಾಗಿದ್ದ ಎಲ್ಲಾ ಕಾಮಗಾರಿಗಳ ಅನುದಾನವನ್ನು ತಡೆಹಿಡಿದಿದ್ದು, ಇದರಿಂದಾಗಿ ಕ್ಷೇತ್ರದ ಮೂಲಭೂತ ಸೌಕರ್ಯ ಸೇರಿದಂತೆ ಇತರ ಅಭಿವೃದ್ಧಿ ಕಾರ್ಯಗಳು ಕುಂಠಿತಗೊAಡಿರುತ್ತದೆ. ಈ ಕುರಿತು ಹಲವು ಬಾರಿ ಸಂಬAಧಪಟ್ಟ ಇಲಾಖೆಗಳ ಸಚಿವರು ಹಾಗೂ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಯಾವುದೇಪ್ರಯೋಜನ ಆಗಿರುವುದಿಲ್ಲ,ತಡೆ ಹಿಡಿದ ಅನುದಾನ ಈವರೆಗೆ ಬಿಡುಗಡೆಯಾಗಿರುವುದಿಲ್ಲ. ಆದ್ದರಿಂದ ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಹಿಂದಿನ ಸರ್ಕಾರದ ಅವಧಿಯಲ್ಲಿ ಮಂಜೂರಾತಿಗೊAಡು ಬಿಡುಗಡೆಯಾಗಿದ್ದ ವಿವಿಧ ಇಲಾಖೆಗಳ ಸುಮಾರು 75 ಕೋಟಿ ಗೂ ಅಧಿಕಮೊತ್ತದ ಬಾಕಿ ಅನುದಾನವನ್ನು ಕೂಡಲೇ ಬಿಡುಗಡೆಮಾಡುವಂತೆ ಶಾಸಕ ಸುನಿಲ್ ಕುಮಾರ್ ಮುಖ್ಯಮಂತ್ರಿಗಳಿಗೆ ಮನವಿ ಪತ್ರದ ಮೂಲಕ ಆಗ್ರಹಿಸಿದ್ದಾರೆ
`