Share this news

 

 

 

 

ಬಾಗಲಕೋಟೆ, ಅ.29 : ನವೆಂಬರ್ ನಲ್ಲಿ ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆ ಹಾಗೂ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ ಮಾಡಲಾಗುತ್ತದೆ ಎನ್ನುವ ಮಾತುಗಳು ಕೇಳಿಬರುತ್ತಿರುವ ನಡುವೆ ಸಚಿವ ಸ್ಥಾನಕ್ಕಾಗಿ ಶಾಸಕರ ಪೈಪೋಟಿ ಜೋರಾಗಿದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ನಾನು ಸಹ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದೇನೆ ಎಂದು ಶಾಸಕ ವಿಜಯಾನಂದ ಕಾಶಪ್ಪನವರ್ ಮಾಧ್ಯಮಗಳಿಗೆ ಬಹಿರಂಗ ಹೇಳಿಕೆ ನೀಡಿದ್ದಾರೆ.

ನಾಯಕತ್ವ ಬದಲಾವಣೆ ಅಥವಾ ಸಚಿವ ಸಂಪುಟ ಪುನಾರಚನೆಯಾಗುವ ಸಾಧ್ಯತೆಗಳು ಇದೆ ಎನ್ನಲಾಗಿದ್ದು, ಈ ಕುರಿತು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮದಲ್ಲಿ ಶಾಸಕ ವಿಜಯಾನಂದ ಕಾಶಪ್ಪನವರ್ ಪತ್ರಕರ್ತರ ಜೊತೆ ಮಾತನಾಡಿ, ನಾನು ಕೂಡ ಮಂತ್ರಿ ಆಗಬಹುದು ಎಂಬ ನಿರೀಕ್ಷೆ ಇದೆ. ಸಚಿವ ಸಂಪುಟ ಪುನಾರಚನೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವರಿಷ್ಠರ ಅನುಮತಿ ಪಡೆದು ಪುನಾರಚನೆ ಮಾಡುವುದಾಗಿ ಹೇಳಿದ್ದಾರೆ. ಈಗಾಗಲೇ ನಾನು ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದೇನೆ ಎಂದು ವಿಜಯಾನಂದ ಕಾಶಪ್ಪನವರ್ ಹೇಳಿದ್ದಾರೆ.

ಈಗಾಗಲೇ 10 ರಿಂದ 15 ಜನ ಶಾಸಕರು ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದು, ಸಚಿವ ಸಂಪುಟ ಪುನಾರಚನೆಯಾದರೆ ಯಾರು ಸಚಿವ ಸ್ಥಾನ ಕಳೆದುಕೊಳ್ಳಲಿದ್ದಾರೆ ಎನ್ನುವ ಆತಂಕವೂ ಹಾಲಿ ಸಚಿವರಿಗಿದೆ. ಇದರ ಜೊತೆ ಭಿನ್ನಮತದ ಬೇಗುದಿ ಶಮನ ಮಾಡುವ ಸವಾಲು ಕೂಡ ಹೈಕಮಾಂಡ್ ಮುಂದಿದೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *