
ಬೆಂಗಳೂರು,ಜೂ.18: ರಾಜ್ಯದ ವಿಧಾನ ಪರಿಷತ್ತಿನ 7 ಸ್ಥಾನಗಳಿಗೆ ಗುರುವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 5 ಸ್ಥಾನ, ಬಿಜೆಪಿ 2 ಸ್ಥಾನ ಗೆದ್ದುಕೊಂಡಿದೆ.ಆದರೆ ಜೆಡಿಎಸ್ ಅಭ್ಯರ್ಥಿಗೆ ಸೋಲಾಗಿದೆ.
ಗುರುವಾರ ವಿಧಾನಸೌಧದಲ್ಲಿ ಬೆಳಿಗ್ಗೆ 9 ರಿಂದ ಮತದಾನ ಆರಂಭವಾಯಿತು. ಸಂಜೆ ಮತ ಎಣಿಕೆ ನಡೆಯಿತು. ಸಂಖ್ಯಾಬಲ ಆಧರಿಸಿ ಕಾಂಗ್ರೆಸ್ 4 ಹಾಗೂ ಬಿಜೆಪಿ 2 ಸ್ಥಾನ ಗೆಲ್ಲಲಿದೆ ಎಂದು ನಿರೀಕ್ಷಿಸಲಾಗಿತ್ತು. ಬಾಕಿ 1 ಸ್ಥಾನಕ್ಕೆ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಸ್ಪರ್ಧೆ ಇತ್ತು. ಕೊನೆಗೆ ಕಾಂಗ್ರೆಸ್‌ನ ಅಭ್ಯರ್ಥಿ ವಿನಯ್ ಕಾರ್ತಿಕ್ ಗೆಲುವು ಸಾಧಿಸಿದ್ದು, ಜೆಡಿಎಸ್‌ನ ಗೋವಿಂದರಾಜು ಸೋತಿದ್ದಾರೆ.
ಕಾಂಗ್ರೆಸ್‌ನಿಂದ ಬಿ ಕೆ ಹರಿಪ್ರಸಾದ್, ತಿಪ್ಪಣ್ಣಪ್ಪ ಕಾಮಕನೂರ್, ಪಿ.ವಿ ಮೋಹನ್, ವಿನಯ್ ಕಾರ್ತಿಕ್, ಶಿವಣ್ಣ ಮಳವಳ್ಳಿ ಸೇರಿ 5 ಮಂದಿ ಗೆಲುವು ಸಾಧಿಸಿ ಪರಿಷತ್‌ಗೆ ಆಯ್ಕೆಯಾಗಿದ್ದಾರೆ. ಬಿಜೆಪಿಯಿಂದ ರಘು ಕೌಟಿಲ್ಯ ಮತ್ತು ಲಿಂಗರಾಜ್ ಪಾಟೀಲ್ ವಿಜಯಶಾಲಿಗಳಾಗಿ ಪರಿಷತ್‌ಗೆ ಕಾಲಿಟ್ಟಿದ್ದಾರೆ.
ಅಚ್ಚರಿಯೆಂದರೆ ಜೆಡಿಎಸ್ ಹಾಗೂ ಬಿಜೆಪಿಯ ಮತಗಳು ಕಾಂಗ್ರೆಸ್ ಪಾಲಾಗಿವೆ. ಹೀಗಾಗಿಯೇ, 4 ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳುವ ಸಾಮರ್ಥ್ಯವಿದ್ದ ಕಾಂಗ್ರೆಸ್ 5ನೇ ಅಭ್ಯರ್ಥಿಯಾಗಿ ವಿನಯ್ ಕಾರ್ತಿಕ್‌ನ ಗೆಲ್ಲಿಸಿಕೊಂಡಿದೆ. ಬಿಜೆಪಿ ವಿಧಾನಸಭೆಯಲ್ಲಿ 62 ಸದಸ್ಯ ಬಲ ಹೊಂದಿದ್ದು, ತನ್ನ ಇಬ್ಬರು ಅಭ್ಯರ್ಥಿಗಳಿಗೆ 30 ಹಂಚಿಕೆ ಮಾಡಿ ಉಳಿದವುಗಳನ್ನು ಜೆಡಿಎಸ್ ಅಭ್ಯರ್ಥಿಗೆ ಹಾಕಲು ಸೂಚಿಸಲಾಗಿತ್ತು. ಆದರೆ, ಬಿಜೆಪಿ ಅಭ್ಯರ್ಥಿಗಳಿಗೇ ಕಡಿಮೆ ಮತ ಬಿದ್ದಿದ್ದು, ಅಡ್ಡ ಮತದಾನದ ಮೂಲಕ ಕಾಂಗ್ರೆಸ್ ಪಾಲಾಗಿವೆ. ಜೆಡಿಎಸ್ ಬಳಿ ಕೇವಲ 18 ಸದಸ್ಯರಿದ್ದು, ಅವರ ಪೈಕಿ ಹಲವರು ಕಾಂಗ್ರೆಸ್‌ಗೆ ಮತ ಹಾಕಿರುವ ಸಾಧ್ಯತೆ ಇದೆ.



.
.
.
.
.
.
.
.
.
.
.
.
.
.
.
.
.
.
.
.
