ಬೆಂಗಳೂರು:ಬಿಜೆಪಿಯ ಫೈರ್ ಬ್ರಾಂಡ್ ಖ್ಯಾತಿಯ ತೇಜಸ್ವಿನಿ ಗೌಡ ಅವರು ಲೋಕಸಭಾ ಟಿಕೆಟ್ ಸಿಗ ದ ಕಾರಣದಿಂದ ಬಿಜೆಪಿ ವಿರುದ್ಧ ಬೇಸತ್ತು ತಮ್ಮ ಪರಿಷತ್ ಸದಸ್ಯಕ್ಕೆ ರಾಜೀನಾಮೆ ನೀಡಿದ್ದಾರೆ.
ಲೋಕಸಭಾ ಟಿಕೆಟ್ ಹಂಚಿಕೆ ಪ್ರಕ್ರಿಯೆ ಶುರುವಾದ ಬೆನ್ನಲ್ಲೇ ಬಿಜೆಪಿಯಲ್ಲಿ ಸ್ಪೋಟಗೊಂಡ ಅಸಮಾಧಾನ ಸಧ್ಯಕ್ಕೆ ನಿಲ್ಲುವ ಲಕ್ಷಣಗಳು ಕಾಣಿಸುತ್ತಿಲ್ಲ. ಈ ನಡುವೆ ಲೋಕಸಭಾ ಟಿಕೆಟ್ ಆಕಾಂಕ್ಷಿಯಾಗಿದ್ದ ವಿಧಾನ ಪರಿಷತ್ ಸದಸ್ಯೆ ತೇಜಸ್ವಿನಿ ಗೌಡ ಅವರು ಬುಧವಾರ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರನ್ನು ಭೇಟಿ ಮಾಡಿ ತಮ್ಮ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಪಕ್ಷಕ್ಕಾಗಿ ಸಾಕಷ್ಟು ದುಡಿದರೂ ಬಿಜೆಪಿಯಲ್ಲಿ ಸೂಕ್ತ ಸ್ಥಾನಮಾನ ಸಿಕ್ಕಿಲ್ಲ ,ಅರ್ಹರಿಗೆ ಟಿಕೆಟ್ ನೀಡುವ ಬದಲು ಪ್ರಭಾವಿಗಳಿಗೆ ಟಿಕೆಟ್ ನೀಡಲಾಗಿದೆ ಇದರಿಂದ ಬೇಸತ್ತು ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಬಿಜೆಪಿ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ