Share this news

ಬೆಂಗಳೂರು : ಬಡರೋಗಿಗಳಿಗೆ ಗುಣಮಟ್ಟದ ಹಾಗೂ ತ್ವರಿತ ಆರೋಗ್ಯ ಸೇವೆ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಇನ್ನು ಮುಂದೆ ರಾಜ್ಯದ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಸೇರಿದಂತೆ ಸಿಬ್ಬಂದಿಗಳಿಗೆ ಮೊಬೈಲ್ ಮೂಲಕ ಹಾಜರಾತಿ ಕಡ್ಡಾಯಗೊಳಿಸಲಾಗುತ್ತಿದೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ X ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ನೂತನ ಹಾಜರಾತಿ ವ್ಯವಸ್ಥೆಗೆ ಆರೋಗ್ಯ ಇಲಾಖೆ ಅಧಿಕಾರಿ, ನೌಕರರು ಸಹಕರಿಸಬೇಕು. ಜುಲೈ 1ರಿಂದ ಮೊಬೈಲ್ ಹಾಜರಾತಿ ಜಾರಿಗೆ ಬರಲಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಸಿಗುವುದಿಲ್ಲ ಎಂಬ ಸಾರ್ವಜನಿಕರ ದೂರುಗಳು ಕಡಿಮೆಯಾಗಲಿವೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

 

 

 

 

 

 

 

Leave a Reply

Your email address will not be published. Required fields are marked *